ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬಂದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಕಾರು ಏಕಾಏಕಿ ರಸ್ತೆಗೆ ಬಂದ ಕಾರಣ ಬಸ್ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಆದರೆ, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಿಯಂತ್ರಿಸಿದ ಕಾರಣ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಿಂದಾಗಿ ಘಾಟಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.
ಇದನ್ನೂ ಓದಿ > > ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ರವಾನೆ!
ಬಳಿಕ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.














