ಹೊಸನಗರ: ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಹುಂಚದ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!
ಮಹೇಂದ್ರ ತನ್ನ ನಾಲ್ವರು ಸ್ನೇಹಿತರೊಂದಿಗೆ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ, ಕೆರೆಯ ದಂಡೆಯ ಮೇಲೆ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.
ಇದನ್ನೂ ಓದಿ > > ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ
ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಜೇಶ್ ಕೆ.ಎಚ್., ಮಂಜುನಾಥ್ ಬಿ., ಆಂಜನೇಯ ಬಿ.ಸಿ., ಸುರೇಶ್ ಗೌಡ ಸಿ. ಪಾಟೀಲ್, ಪ್ರವೀಣ್ ಕುಮಾರ್ ಬಿ.ಬಿ. ಹಾಗೂ ಅಪ್ಪಕ್ ಬಿ. ಅವರು ಕಾರ್ಯಾಚರಣೆ ನಡೆಸಿ ಕೆರೆಯಿಂದ ಮಹೇಂದ್ರ ಅವರ ಮೃತದೇಹವನ್ನು ಹೊರತೆಗೆದರು.
ಇದನ್ನೂ ಓದಿ > > ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು
ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














