ಶಿವಮೊಗ್ಗ : ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದ ವಾಸ್ತವ ಸ್ಥಿತಿಯನ್ನು ಅರಿಯಲು ಬಿಜೆಪಿ ನಿಯೋಗ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ.
ಇದನ್ನೂ ಓದಿ > > ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!
ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಎದುರಾಗಿರುವ ಕುಡಿಯುವ ನೀರಿನ ಅಭಾವ, ಕೃಷಿ ಬೆಳೆ ಹಾನಿ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಕುರಿತು ನಾಯಕರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಶಿವಮೊಗ್ಗ ಜಿಲ್ಲೆಯ ಯಾವ ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ ಮತ್ತು ಸರ್ಕಾರದಿಂದ ತಲುಪಬೇಕಾದ ಪರಿಹಾರದ ಸ್ಥಿತಿಗತಿಗಳ ಕುರಿತು ಅಧಿಕಾರಿಗಳು ಬಿಜೆಪಿ ತಂಡಕ್ಕೆ ವಿವರಣೆ ನೀಡಿದರು.
ಇದನ್ನೂ ಓದಿ > > ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು!
ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ರೈತರಿಗೆ ಸೂಕ್ತ ಬೆಳೆ ನಷ್ಟ ಪರಿಹಾರ ಹಾಗೂ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ನಾಯಕರು ಅಧಿಕಾರಿಗಳಿಗೆ ಸೂಚಿಸಿದರು. ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರು, ಬರದ ನೈಜ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.
ಇದನ್ನೂ ಓದಿ > > ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ














