ಶಿವಮೊಗ್ಗ : ನಗರದ ಹೊಳೆ ಬಸ್ ನಿಲ್ದಾಣದ ಸಮೀಪ ಮಹಿಳೆಯೊಬ್ಬರು ಹೊಳೆಗೆ ಧುಮುಕಿದ್ದಾರೆ ಎಂದು ಶಂಕಿಸಲಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ > > ಶಿವಮೊಗ್ಗ, 1 ಕಾರು, 3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ
ತುಂಗಾ ನದಿ ದಂಡೆ ಮೇಲೆ ವೇಲ್ ಮತ್ತು ಮೊಬೈಲ್ ಫೋನ್ ಪತ್ತೆಯಾಗಿದ್ದು, ಮೊಬೈಲ್ ಫೋನ್ ಲಾಕ್ ಆಗಿದೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಬಿಜೆಪಿ ಬರ ಅಧ್ಯಯನ, ಅಧಿಕಾರಿಗಳೊಂದಿಗೆ ನಾಯಕರ ಮಹತ್ವದ ಸಭೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಆಗಮಿಸಿ ಮಹಿಳೆಯ ಪತ್ತೆಗಾಗಿ ಹೊಳೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಮಹಿಳೆಯ ಗುರುತು ಹಾಗೂ ಅವರು ಹೊಳೆಗೆ ಧುಮುಕಲು ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.














