ಸಾಗರ: ಟಿಟಿ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಅರುಣ್ ಕುಮಾರ್ (45) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?
ಜೋಗದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಆನಂದಪುರ ರಾಷ್ಟ್ರೀಯ ಹೆದ್ದಾರಿಯ ಅರಣ್ಯ ಇಲಾಖೆಯ ವಸತಿ ನಿಲಯದ ಮುಂಭಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಸ್ಕೂಟಿ ಸವಾರ ಟಿಟಿ ವಾಹನದ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಅವರ ಕಾಲಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > > ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್
ಗಾಯಾಳುವನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ > > ಹೊಳೆಹೊನ್ನೂರು, ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ) ಸೆರೆ
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.














