• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರೂಪಕ್ಕಿಂತ ಗುಣವೇ ಆತ್ಮದ ಸ್ಪಂದನ : ಜಿ.ಎಸ್.ನಾರಾಯಣ ರಾವ್

ಎ.ಟಿ.ಎನ್.ಸಿ ಕಾಲೇಜು: ಸಮಗ್ರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 5, 2026
in ಶಿವಮೊಗ್ಗ
ರೂಪಕ್ಕಿಂತ ಗುಣವೇ ಆತ್ಮದ ಸ್ಪಂದನ : ಜಿ.ಎಸ್.ನಾರಾಯಣ ರಾವ್
Share on FacebookShare on TwitterShare on WhatsApp

ಶಿವಮೊಗ್ಗ: ರೂಪ ಕಣ್ಣುಗಳಿಗೆ ಸೀಮಿತವಾದರೆ, ಗುಣವು ಆತ್ಮವನ್ನು ಸ್ಪರ್ಶಿಸಿ ಜೀವನಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ಆದ್ದರಿಂದ ವ್ಯಕ್ತಿಯ ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ ಅಡಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಮಗ್ರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷಕ್ಕೆ ಪ್ರವೇಶಾತಿ ಪಡೆದ ಬಿಬಿಎ, ಬಿಕಾಂ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ > > ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್

ವಿದ್ಯೆ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕವಾಗಿ ಬೆಳೆಯುವ ಅವಕಾಶವನ್ನು ಎನ್ಇಎಸ್ ಸಂಸ್ಥೆ ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲ್ಯವನ್ನು ಪ್ರೌಢಿಮೆಗೆ ತಲುಪಿಸಲು ನಿರಂತರ ಚಿಂತನೆ ಹಾಗೂ ಅಭ್ಯಾಸ ಅಗತ್ಯ. ಇಂದಿನ ಸಮಾಜಕ್ಕೆ ಕೌಶಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಹೆಚ್ಚಿದ್ದು, ಸಮಾಜದೊಂದಿಗೆ ಬೆರೆತು ಬದುಕುವ ಗುಣವನ್ನು ಬೆಳೆಸಿಕೊಳ್ಳಬೇಕು.

ಆಧುನಿಕ ಯುಗದಲ್ಲಿ ಸಂಬಂಧಗಳು ಕಡಿಮೆಯಾಗುತ್ತಿದೆ. ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸಿಕೊಂಡಾಗ ಮಾತ್ರ ವಿದ್ಯೆ ಎಂಬುದು ಸಾರ್ಥಕ.  ಎಲ್ಲಿ ಒಳ್ಳೆಯ ಸಂಸಾರವಿದೆ ಅಲ್ಲಿ ಒಳ್ಳೆಯ ಸಂಸ್ಕಾರವಿದೆ. ಭಾಷೆ ನಗಣ್ಯವಾದಾಗ, ಸಂಸ್ಕೃತಿ ಸಂಸ್ಕಾರವು ನಗಣ್ಯವಾಗುತ್ತದೆ. ನಮ್ಮ ಮಾತೃಭಾಷೆ, ಪಕೃತಿಯ ಬಗ್ಗೆ ಕಾಳಜಿವಹಿಸಬೇಕು. ಕುಟುಂಬ ಜೀವನ ಪದ್ದತಿಗೆ ಆದ್ಯತೆ ನೀಡಿ. ಮನಸ್ಸುಗಳನ್ನು ಕಟ್ಟುವ ಕಾರ್ಯ ಯುವ ಸಮೂಹದಿಂದ ನಡೆಯಲಿ.

ಇದನ್ನೂ ಓದಿ > > ಟಿಟಿ – ಸ್ಕೂಟಿ ನಡುವೆ ಭೀಕರ ಅಪಘಾತ, ಟಿಟಿ ಅಡಿಯಲ್ಲಿ ಸಿಲುಕಿದ ಸ್ಕೂಟಿ!

ಒಬ್ಬ ವ್ಯಕ್ತಿಯ ಇರುವಿಕೆ ವಾತಾವರಣದಲ್ಲಿ ಸಂತೋಷವನ್ನು ನೀಡುವಂತಿರಬೇಕು ವಿನಃ, ಅವರ ನಿರ್ಗಮನದಿಂದ ಸಂತೋಷ ಉಂಟಾಗುವಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಡಿ. ಹಾಗಾಗಿಯೇ ವ್ಯಕ್ತಿತ್ವದ ಪ್ರಖರತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಿ. ಭಾಷೆಯ ವಿದ್ವತ್ತನ್ನು ಪಡೆಯಲು ದಿನಪತ್ರಿಕೆಗಳನ್ನು ಓದಿ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಆಚಾರ್ಯ ತುಳಸಿ ಕಾಲೇಜು ತನ್ನದೇ ಆದ ಸಮೃದ್ಧ ಇತಿಹಾಸ ಮತ್ತು ಮೌಲ್ಯಾಧಾರಿತ ಶಿಕ್ಷಣ ಪರಂಪರೆಯನ್ನು ಹೊಂದಿದೆ. ಜೈನ ಸಂತರಾದ ಆಚಾರ್ಯ ತುಳಸಿ ಅವರು ಮಲೆನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎನ್.ಇ.ಎಸ್. ಸಂಸ್ಥೆಯ ಶಿಕ್ಷಣ ಸೇವೆಯ ಆಶಯಗಳನ್ನು ಮೆಚ್ಚಿ, ಅಂದಿನ ಕಾಲದಲ್ಲೇ ಸುಮಾರು ಒಂದು ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದರು. ಅವರ ಉದಾರ ಸೇವಾ ಮನೋಭಾವ ಮತ್ತು ಶಿಕ್ಷಣದ ಮೇಲಿನ ಬದ್ಧತೆಯ ಸ್ಮರಣಾರ್ಥ ಕಾಲೇಜಿಗೆ ‘ಆಚಾರ್ಯ ತುಳಸಿ ಕಾಲೇಜು’ ಎಂದು ನಾಮಕರಣ ಮಾಡಲಾಗಿದೆ.

ಕಾಲೇಜಿನಲ್ಲಿ ಸಹಪಾಠಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಪರಸ್ಪರ ಕಲಿಕೆಯ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈ ವಿಧಾನದಿಂದಲೇ ಉತ್ತಮ ಶೈಕ್ಷಣಿಕ ಫಲಿತಾಂಶಗಳು, ಸಾಧಕರು ಹಾಗೂ ಸಮಾಜಮುಖಿ ವ್ಯಕ್ತಿತ್ವಗಳು ವಿದ್ಯಾಸಂಸ್ಥೆಯಿಂದ ರೂಪುಗೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ > > ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಇಂದಿನ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ, ಕೇವಲ ಪದವಿ ಪಡೆದು ಸಮಾಜಕ್ಕೆ ಕಾಲಿಟ್ಟರೆ, ನಿರೀಕ್ಷೆಗಳು ಮತ್ತು ವಾಸ್ತವದ ನಡುವೆ ಭ್ರಮನಿರಸನ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಪ್ರಶಾಂತ್ ನಾಯಕ್ ಮಾತನಾಡಿ, ಜ್ಞಾನ ಮತ್ತು ಕೌಶಲ್ಯವೇ ನಿಜವಾದ ಸಂಪತ್ತು. ಇಂದಿನ ಜಗತ್ತಿನಲ್ಲಿ ವ್ಯಕ್ತಿಯ ಬೌದ್ಧಿಕ ಸಾಮರ್ಥ್ಯ ಅತ್ಯಂತ ಮೌಲ್ಯಯುತ ಆಸ್ತಿ. ಪ್ರೀತಿ, ವಿಶ್ವಾಸ, ಸಂಸ್ಕೃತಿ ಮತ್ತು ಮಾನವೀಯತೆ ಇಲ್ಲದ ಶಿಕ್ಷಣ ಅಪೂರ್ಣವಾಗಿದ್ದು, ಅಂಕಗಳು ಜೀವನದ ಒಂದು ಭಾಗ ಮಾತ್ರ; ನಿಜವಾದ ಯಶಸ್ಸು ಜ್ಞಾನ, ಕೌಶಲ್ಯ, ಮಾನವೀಯತೆ ಮತ್ತು ಉತ್ತಮ ವ್ಯಕ್ತಿತ್ವದಿಂದ ಬರುತ್ತದೆ.

ಮೊಬೈಲ್ ರಹಿತ ದಿನಾಚರಣೆ ಆಚರಿಸಿ

ಇಂದು ಪ್ರೀತಿ, ಸ್ನೇಹ, ತಂದೆ-ತಾಯಿ ಸೇರಿದಂತೆ ವಿವಿಧ ಸಂಬಂಧಗಳಿಗೆ ಮೀಸಲಾದ ವಿಶೇಷ ದಿನಾಚರಣೆಗಳನ್ನು ಆಚರಿಸಲಾಗುತ್ತಿದೆ. ಆದರೆ ಇಂತಹ ದಿನಾಚರಣೆಗಳು ಕೇವಲ ಔಪಚಾರಿಕತೆಗೆ ಸೀಮಿತವಾಗಿದೆ. ಸಂಬಂಧಗಳನ್ನು ಗೌರವಿಸುವುದು ಮತ್ತು ಪ್ರೀತಿಸುವುದು ನಮ್ಮ ಬದುಕಿನ ನಿತ್ಯೋತ್ಸವವಾಗಬೇಕು. ನಿಜವಾಗಿಯು ಆಚರಿಸುವುದಾದರೆ ಕಾಲೇಜಿನಲ್ಲಿ ಒಂದು ದಿನ ಮೊಬೈಲ್ ರಹಿತ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಿ. ಅದರಿಂದ ಮನಸ್ಸು ಉತ್ಸಾಹಭರಿತವಾಗಿರಲಿದೆ, ಒಳ್ಳೆಯ ನಿದ್ದೆ ಬರಲಿದೆ ಎಂದು  ಕುವೆಂಪು ವಿವಿ ಕನ್ನಡ ಪ್ರಾಧ್ಯಾಪಕರಾದ ಪ್ರಶಾಂತ್ ನಾಯಕ್‌ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿಶೇಷಾಧಿಕಾರಿ ಡಾ.ಆರ್.ಎಂ.ಜಗದೀಶ್, ಐಕ್ಯೂಎಸಿ ಸಂಚಾಲಕರಾದ ಕೆ.ಅನುಪಮ ಸೇರಿದಂತೆ ವಿವಿಧ ವಿದ್ಯಾರ್ಥಿ ವೇದಿಕೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Tags: kannada newskannada news livemalnad newsQuality rather than form is the pulse of the soul: G.S. Narayana Raoshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಸರಣಿ ಹಗರಣ!: ಡಾ. ಧನಂಜಯ ಸರ್ಜಿ ವಾಗ್ದಾಳಿ

Next Post

ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ

ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Copyright © 2026 Yuva Dhwani. Designed by KIPL