• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಸ್ತೂರಬಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆಗಳ ಉದ್ಘಾಟನೆ, ವಿವಿಧತೆಯ ಸ್ವಾಗತ ಕೋರಿದ ವಿದ್ಯಾರ್ಥಿನಿಯರು

ಶಿಕ್ಷಣ ನೀತಿಗಿಂತ ಶಾಲಾ ಸೌಲಭ್ಯಗಳಿಗೆ ಆದ್ಯತೆ ನೀಡಿ | ವಿಧಾನಪರಿಷತ್ತಿನ ಸದಸ್ಯರಾದ ಎಸ್.ಎಲ್. ಭೋಜೇಗೌಡ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 6, 2026
in ಶಿವಮೊಗ್ಗ
ಕಸ್ತೂರಬಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆಗಳ ಉದ್ಘಾಟನೆ, ವಿವಿಧತೆಯ ಸ್ವಾಗತ ಕೋರಿದ ವಿದ್ಯಾರ್ಥಿನಿಯರು
Share on FacebookShare on TwitterShare on WhatsApp

ಶಿವಮೊಗ್ಗ: ಮೊದಲು ಶಾಲೆಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿ, ನಂತರ ಯಾವುದೇ ಶಿಕ್ಷಣ ನೀತಿಯನ್ನು ಸರ್ಕಾರ ಅಳವಡಿಸಲಿ ಎಂದು ವಿಧಾನಪರಿಷತ್ತಿನ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹೇಳಿದರು.

ನಗರದ ಕಸ್ತೂರಬಾ ಪದವಿಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿವಿಧ ವಿದ್ಯಾರ್ಥಿನಿ ಸಂಘಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಹಾಗೂ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮೊದಲು ಆದ್ಯತೆ ನೀಡಬೇಕಾಗಿದೆ. ಮೂಲಭೂತ ವ್ಯವಸ್ಥೆಗಳಿಲ್ಲದೆ ಕೇವಲ ಹೊಸ ಶಿಕ್ಷಣ ನೀತಿಗಳನ್ನು ಜಾರಿಗೊಳಿಸಿದರೆ ನಿರೀಕ್ಷಿತ ಫಲಿತಾಂಶ ಸಾಧಿಸಲು ಸಾಧ್ಯವಾಗುವುದಿಲ್ಲ.

ಗುಣಮಟ್ಟದ ಶಿಕ್ಷಣ ಪ್ರಮುಖ ಆದ್ಯತೆಯಾಗಬೇಕು. ವಾಸ್ತವಾಂಶಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸುವ ಮನೋಭಾವ ಬೆಳೆಸುವ ಬದಲು, ಪ್ರಶ್ನಿಸದೆ ಸತ್ಯವೆಂದು ಒಪ್ಪಿಕೊಳ್ಳುವ ಮನಸ್ಥಿತಿ ಮಕ್ಕಳಲ್ಲಿ ಬೆಳೆಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಪಠ್ಯಪುಸ್ತಕಗಳ ರಚನೆ ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿರಬೇಕು. ವೈಜ್ಞಾನಿಕ ಮನೋಭಾವ, ಮಾನವೀಯ ಮೌಲ್ಯಗಳು, ಭಾಷಾ ಪ್ರಾವೀಣ್ಯ ಮತ್ತು ವಿಮರ್ಶಾತ್ಮಕ ಚಿಂತನೆ ಬೆಳೆಸುವಂತಹ, ನಾಡು-ನುಡಿಗೆ ಬೆಳಕಾಗುವ ಪಠ್ಯಪುಸ್ತಕಗಳನ್ನು ರೂಪಿಸುವ ಅಗತ್ಯವಿದೆ.

ಇದನ್ನೂ ಓದಿ > > ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ

ಕನ್ನಡವನ್ನು ಆಡಳಿತ ಭಾಷೆಯಾಗಿ ಬಲಪಡಿಸುವ ಉದ್ದೇಶ ಶ್ಲಾಘನೀಯ. ಅದಕ್ಕೆ ಪೂರಕವಾಗಿ ಯಾವ ರೀತಿಯ ಮೂಲಭೂತ ಸೌಕರ್ಯವನ್ನು ಕನ್ನಡ ಶಾಲೆಗೆ ನೀಡಬೇಕು ಎಂಬ ದೂರದೃಷ್ಟಿ ಸರ್ಕಾರಕ್ಕಿಲ್ಲ. ಮೊದಲು ಸರ್ಕಾರಿ ಶಾಲೆಗಳ‌ ಮೇಲೆ ಮಾನ್ಯತೆ ನವೀಕರಣದ ಮಾನದಂಡ ಅಳವಡಿಸಿ, ನಂತರ ಖಾಸಗಿ ಶಾಲೆಗಳ ಮೇಲೆ ಗುಣಮಟ್ಟದ ಮಾನದಂಡಗಳೊಂದಿಗೆ ಮೌಲ್ಯಮಾಪನ ನಡೆಸಿ ಎಂದು ಹೇಳಿದರು.

ಪದವಿಯ ನಂತರ ಕುಟುಂಬಕ್ಕೆ ನಾಡಿಗೆ ಬೆಳಕಾಗುವ ಸಂದರ್ಭದಲ್ಲಿ, ನಾವು ಓದಿದ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದಿರಿ. ಹಿರಿಯರು ಕಟ್ಟಿದ ಸ್ವಾಸ್ಥ್ಯ ಸಮಾಜದಲ್ಲಿ ಮಾನವೀಯ ನೆಲೆಗಳೊಂದಿಗೆ ಉತ್ತಮ ಸಂಬಂಧಗಳ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಕನ್ನಡ ಸಾಹಿತ್ಯ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರೇರಣೀಯ ಮಾತುಗಳನ್ನು ನೀಡಿದೆ. ಅಂತಹ ಎಲ್ಲಾ ವಿಚಾರಗಳನ್ನು ಅಳವಡಿಸಿಕೊಂಡಾಗ ಮಾತ್ರ, ಪಡೆದ ಶಿಕ್ಷಣದಿಂದ ನಿಜವಾದ ಸಾರ್ಥಕ ಸಾಧ್ಯ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ > > ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ!

ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್. ಎನ್. ನಾಗರಾಜ ಮಾತನಾಡಿ, ನಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಹಲವು ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ಸರ್ಕಾರದಿಂದ ನೇಮಕಗೊಳ್ಳಬೇಕಾದ ಬೋಧಕರ ಕೊರತೆಯಿದ್ದರೂ, ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಆಡಳಿತ ಮಂಡಳಿಯೇ ಹೆಚ್ಚುವರಿ ಬೋಧಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣ ನೀಡಲು ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ > > ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ, ಯಾವುದೇ ವಿಷಯದ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯುವ ಅವಕಾಶವಿದೆ. ಆದರೆ ಮಾಹಿತಿಯನ್ನು ವಿವೇಚನೆಯೊಂದಿಗೆ ಅರ್ಥೈಸಿ, ಆಧುನಿಕ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪಠ್ಯಜ್ಞಾನದ ಜೊತೆಗೆ ವಾಸ್ತವತೆಯನ್ನು ಅರಿಯುವ ವಿವೇಚನಾ ಶಕ್ತಿಯನ್ನು, ವಿದ್ಯಾರ್ಥಿಗಳಲ್ಲಿ ಬೆಳೆಸುವ ಜವಾಬ್ದಾರಿ ಗುರುಗಳ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿವಿಧತೆಯ ಸ್ವಾಗತ ಕೋರಿದ ವಿದ್ಯಾರ್ಥಿನಿಯರು

ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರುವ ಉದ್ದೇಶದಿಂದ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿನಿಯರು, ಕುವೆಂಪು ರಂಗಮಂದಿರದ ಪ್ರವೇಶ ದ್ವಾರದಲ್ಲಿ ನಿಂತು, ಅತಿಥಿಗಳನ್ನು ಆಯಾ ರಾಜ್ಯಗಳ ಭಾಷೆಗಳಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಕೊಡಗು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಪಂಜಾಬ್, ಆಗ್ರಾ ಹಾಗೂ ಬಂಜಾರ ಸಂಸ್ಕೃತಿಯ ಉಡುಗೆ ತೊಟ್ಟ ವಿದ್ಯಾರ್ಥಿನಿಯರು ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯ ಅನನ್ಯ ಚಿತ್ರಣವನ್ನು ಮೂಡಿಸಿದರು.

ನಿವೃತ್ತ ಇತಿಹಾಸ ಉಪನ್ಯಾಸಕರಾದ ಎಚ್.ವಿ.ಶುಭಕರ್ ದಂಪತಿಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್. ಎಸ್.ಎಚ್ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ.ಸಿ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷರಾದ ಸುಜನಾ.ಕೆ, ಉಪಾಧ್ಯಕ್ಷರಾದ ಯಶಸ್ವಿನಿ, ಚೇತನಾ ಕುಮಾರಿ, ಸೀಮಾ ಭಾನು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Inauguration of student forums at Kasturba PU Collegekannada newskannada news livelatest newsmalnad newsshimogashivamoggastudents welcome diversityರಾಷ್ಟ್ರೀಯ ಶಿಕ್ಷಣ ಸಮಿತಿ
Previous Post

ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ!

Next Post

ಶಿವಮೊಗ್ಗ: ಗುಡ್ಡೇಕಲ್ ನಲ್ಲಿ ಸಂಭ್ರಮದ ಹರೋಹರ ಜಾತ್ರೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ: ಗುಡ್ಡೇಕಲ್ ನಲ್ಲಿ ಸಂಭ್ರಮದ ಹರೋಹರ ಜಾತ್ರೆ

ಶಿವಮೊಗ್ಗ: ಗುಡ್ಡೇಕಲ್ ನಲ್ಲಿ ಸಂಭ್ರಮದ ಹರೋಹರ ಜಾತ್ರೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL