• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಔಷಧ ಮಹಾವಿದ್ಯಾಲಯದಲ್ಲಿ 2ನೇ ರಾಷ್ಟ್ರೀಯ ಫಾರ್ಮಕಾಲಜಿ ದಿನಾಚರಣೆ 

ಔಷಧ ಸಂಶೋಧನೆಗೆ ಎಐ ಹೊಸ ಸ್ಪರ್ಶ | ಡಾ. ತಿಪ್ಪೇಸ್ವಾಮಿ ಬಿ.ಎಸ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 9, 2026
in ಶಿವಮೊಗ್ಗ
ಔಷಧ ಮಹಾವಿದ್ಯಾಲಯದಲ್ಲಿ 2ನೇ ರಾಷ್ಟ್ರೀಯ ಫಾರ್ಮಕಾಲಜಿ ದಿನಾಚರಣೆ 
Share on FacebookShare on TwitterShare on WhatsApp
ಶಿವಮೊಗ್ಗ: ಉತ್ತಮ ಆರೋಗ್ಯಕ್ಕಾಗಿ ಹೊಸ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಪಾತ್ರ ವಹಿಸುತ್ತಿದ್ದು, ಔಷಧ ಸಂಶೋಧನಾ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿದೆ ಎಂದು ಸೌದಿ ಅರೇಬಿಯಾದ ಶಾಖ್ರಾ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಫಾರ್ಮಸಿ ಔಷಧಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ ಬಿ.ಎಸ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ > > ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಊರಿಗೆ ಮರಳಲು ನೆರವು!, ಮಾನವೀಯತೆ ಮೆರೆದ ಪೊಲೀಸರು
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಔಷಧಶಾಸ್ತ್ರ ವಿಭಾಗ ಹಾಗೂ ಇಂಡಿಯನ್ ಫಾರ್ಮಸಿ ಗ್ರಾಜುಯೇಟ್ಸ್ ಅಸೋಸಿಯೇಷನ್ ಮಹಿಳಾ ವೇದಿಕೆಯ ಕರ್ನಾಟಕ ಘಟಕದ ವತಿಯಿಂದ ಶನಿವಾರ ಭಾರತೀಯ ಔಷಧಶಾಸ್ತ್ರದ ಪಿತಾಮಹ ಸರ್ ರಾಮನಾಥ್ ಚೋಪ್ರಾ ಅವರ 144ನೇ ಜನ್ಮದಿನದ ಅಂಗವಾಗಿ 2 ನೇ ರಾಷ್ಟ್ರೀಯ ಔಷಧಶಾಸ್ತ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > > ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಬಂದ್ ಗೆ ಕರೆ, ಕಾರಣವೇನು?
ಔಷಧಗಳ ಪರಿಣಾಮ, ಅಡ್ಡಪರಿಣಾಮ, ಪರಸ್ಪರ ಕ್ರಿಯೆ, ಹೊಸ ಔಷಧದ ಗುರಿಗಳ ಕಡಿಮೆ ಸಮಯದಲ್ಲಿ ಗುರುತಿಸುವಿಕೆ ಹಾಗೂ ಸಂಯುಕ್ತಗಳ ವಿಶ್ಲೇಷಣೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಸಹಕಾರಿಯಾಗಿವೆ.
ಔಷಧಗಳು ವಿವಿಧ ಜೀನ್‌ಗಳು, ಪ್ರೋಟೀನ್ ಮತ್ತು ಜೈವಿಕ ಮಾರ್ಗಗಳ ಮೇಲೆ ಬೀರುವ ಒಟ್ಟಾರೆ ಪರಿಣಾಮವನ್ನು ಅರ್ಥಮಾಡಿಕೊಳ್ಳಲು ಜಾಲರೂಪದ ಔಷಧ ವಿಜ್ಞಾನ ನೆರವಾಗುತ್ತದೆ. ಎಐ ಮೇಲ್ವಿಚಾರಿತ ಯಂತ್ರ ಕಲಿಕೆಯಲ್ಲಿರುವ ಬೆಂಬಲ ವಾಹಕ ಯಂತ್ರ ವಿಧಾನವನ್ನು ಔಷಧೀಯ ದತ್ತಾಂಶ ವಿಶ್ಲೇಷಣೆಗೆ ಬಳಸಬಹುದಾಗಿದೆ. ಎಐ ಮೇಲ್ವಿಚಾರಣೆಯಿಲ್ಲದ ಯಂತ್ರ ಕಲಿಕೆ ಮೂಲಕ ದತ್ತಾಂಶದಲ್ಲಿರುವ ಗುಪ್ತ ಮಾದರಿಗಳು ಮತ್ತು ಸಂಬಂಧಗಳನ್ನು ಗುರುತಿಸಬಹುದು ಎಂದು ವಿವರಿಸಿದರು.
 ಪ್ರಾಂಶುಪಾಲರಾದ ಡಾ. ಎಸ್.ಎನ್. ಶ್ರೀಹರ್ಷ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಔಷಧ ಸಂಶೋಧನೆಗೆ ಉತ್ತೇಜನ’ ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಔಷಧವಿಜ್ಞಾನದ ಜ್ಞಾನದೊಂದಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಜ್ಞಾನವನ್ನು ಸಮನ್ವಯಗೊಳಿಸಿದಾಗ, ಔಷಧ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳಬಹುದು.
ಇದನ್ನೂ ಓದಿ > > ಕಸ್ತೂರಬಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆಗಳ ಉದ್ಘಾಟನೆ, ವಿವಿಧತೆಯ ಸ್ವಾಗತ ಕೋರಿದ ವಿದ್ಯಾರ್ಥಿನಿಯರು
ಎಐ ನೆರವಿನಿಂದ ಹೆಚ್ಚಿನ ಪ್ರಮಾಣದ ದತ್ತಾಂಶವನ್ನು ವೇಗವಾಗಿ ವಿಶ್ಲೇಷಿಸಿ, ಸಂಶೋಧನೆಯ ನಿಖರತೆಯನ್ನು ಹೆಚ್ಚಿಸುವುದರ ಜೊತೆಗೆ ಪರಿಣಾಮಕಾರಿ ಔಷಧಗಳ ಅಭಿವೃದ್ಧಿ ಪ್ರಕ್ರಿಯೆಯನ್ನು ಮತ್ತಷ್ಟು ಸುಧಾರಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಔಷಧವಿಜ್ಞಾನ ಕ್ಷೇತ್ರದ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಆಧುನಿಕ ತಂತ್ರಜ್ಞಾನಗಳ ಜ್ಞಾನವನ್ನು ಹೊಂದುವುದು ಅಗತ್ಯವಾಗಿದೆ ಎಂದು ಹೇಳಿದರು.
ವಿಭಾಗದ ಮುಖ್ಯಸ್ಥರಾದ ಡಾ. ಜೆ.ಹೆಚ್. ವಿರೂಪಾಕ್ಷ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
Tags: 2nd National Pharmacology Day celebrated at the College of PharmacyCollege of Pharmacykannada newskannada news livelatest newsmalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಊರಿಗೆ ಮರಳಲು ನೆರವು!, ಮಾನವೀಯತೆ ಮೆರೆದ ಪೊಲೀಸರು

Next Post

 ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
 ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ

 ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL