• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ಬಂದ್ ಅನಿವಾರ್ಯ, ಕಲ್ಲೂರು ಮೇಘರಾಜ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 12, 2026
in ಶಿವಮೊಗ್ಗ
ಶಿವಮೊಗ್ಗ ಜಿಲ್ಲೆ ಬಂದ್ ಅನಿವಾರ್ಯ, ಕಲ್ಲೂರು ಮೇಘರಾಜ್
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯನ್ನೆ ಬಂದ್ ಮಾಡಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಕ್ರ್ಯೂಟ್ ಬೆಂಚ್ ಸ್ಥಾಪನೆಗೆ ನಿರಂತರ ಹೋರಾಟ ನಡೆಯುತ್ತಿದೆ. 2005 ರ ನವೆಂಬರ್ 30 ರಂದು ಶಿವಮೊಗ್ಗ ನಗರ ಬಂದ್ ಮಾಡಿ ಮೆಡಿಕಲ್ ಕಾಲೇಜು, ಹೊಸ ಬಸ್ ನಿಲ್ದಾಣದ ಬೇಡಿಕೆಗಳನ್ನೂ ಮುಂದಿಟ್ಟಿದ್ದೆವು. ಅದೇ ರೀತಿ ಈ ಹೋರಾಟವನ್ನೂ ಹಮ್ಮಿಕೊಳ್ಳಲಾಗುವುದು. ವಕೀಲರ ಸಂಘ ಇದರ ನೇತೃತ್ವ ವಹಿಸಬೇಕಾಗಿದೆ, ಅವರ ಜೊತೆ ನಾವು ಇರುತ್ತೇವೆ. ಸಂಘ ಸಂಸ್ಥೆಗಳು ಕೈ ಜೋಡಿಸಬೇಕು. ಇಡೀ ಜಿಲ್ಲೆಯಲ್ಲೇ ಈ ಬಗ್ಗೆ ಹೋರಾಟದ ಕಿಚ್ಚನ್ನು ಹಚ್ಚಬೇಕಾಗಿದೆ. ಎಲ್ಲಾ ಪಕ್ಷಗಳು ಪಕ್ಷಭೇದ ಮರೆತು ಒಟ್ಟಾಗಿ ಹೋರಾಟ ರೂಪಿಸಬೇಕಾಗಿದೆ ಎಂದರು.

ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಇಲ್ಲದ ಕಾರಣ ಮಧ್ಯ ಮತ್ತು ಉತ್ತರ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಹೋಗಬೇಕಾಗಿದೆ. ಈ 7 ಜಿಲ್ಲೆಗಳಲ್ಲಿ ಮಾತ್ರ 3 ಲಕ್ಷ 34 ಸಾವಿರಕ್ಕೂ ಹೆಚ್ಚು ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಇದರಿಂದ ಬಡಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಶಿವಮೊಗ್ಗದಲ್ಲಿ 65,900, ದಾವಣಗೆರೆ 77,650, ಚಿಕ್ಕಮಗಳೂರು 38,810, ಚಿತ್ರದುರ್ಗ 42,429, ಉಡುಪಿ 35,866, ದ.ಕ 34,660, ಉ.ಕ 40,380 ಪ್ರಕರಣಗಳು ಬಾಕಿ ಇವೆ ಎಂದು ಅವರು ಅಂಕಿ-ಅಂಶ ಸಮೇತ ತಿಳಿಸಿದರು.

ಇದನ್ನೂ ಓದಿ > > ಟ್ರಾಫಿಕ್ ಪೊಲೀಸರ ಖಡಕ್ ಕಾರ್ಯಾಚರಣೆ, ಹಣ್ಣಿನ ಅಂಗಡಿಗಳ ತೆರವು!

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾ ಬಂದ್ ಮಾಡುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್.ಎಂ. ಸಂಗಯ್ಯ, ನಂಜುಂಡಪ್ಪ, ಚಾಬೂಸಾಬ್, ಗೀತಾ, ಶಿವಣ್ಣ, ಆಶೋಕ್, ಆಲೀಂಖಾನ್, ಶಂಕ್ರಾನಾಯ್ಕ, ಚಂದ್ರಪ್ಪ ಆದಿಯಾಗಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ > > ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ದಾಖಲೆಗಳ ಪರಿಶೀಲನೆ

Tags: Kallur Meghrajkannada newskannada news livelatest newsmalnad newsshimogaShimoga district bandh inevitableshivamoggaಶಿವಮೊಗ್ಗ
Previous Post

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

Next Post

ಆಗುಂಬೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಡಿ.ಶಿವಣ್ಣ ನಿಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಗುಂಬೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಡಿ.ಶಿವಣ್ಣ ನಿಧನ

ಆಗುಂಬೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಡಿ.ಶಿವಣ್ಣ ನಿಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL