ಹೊಳೆಹೊನ್ನೂರು: ಆಗುಂಬೆ ಪೊಲೀಸ್ ಠಾಣೆ ಮುಖ್ಯ ಪೇದೆ, ಆನವೇರಿ ಗ್ರಾಮದ ನಿವಾಸಿ ಡಿ.ಶಿವಣ್ಣ (52) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.
ಕಳೆದ ವಾರ ಕರ್ತವ್ಯದಲ್ಲಿದ್ದಾಗ ಶಿವಣ್ಣ ಅಸ್ವಸ್ಥಗೊಂಡು ತಲೆ ಸುತ್ತಿ ಬಿದ್ದಿದ್ದರು. ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ
ಜಿಲ್ಲಾ ಪೊಲೀಸ್ ತಂಡ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಗೌರವ ನಮನ ಸಲ್ಲಿಸಿತು. ಜಿಲ್ಲಾ ವರಿಷ್ಠಾಧಿಕಾರಿ ನಿಖಿಲ್ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
೨೦ ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮಾಳೂರು ಸೇರಿ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಆಗುಂಬೆ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಣ್ಣ ಅವರ ಕುಟುಂಬ ಮಾಳೂರಿನಲ್ಲಿರುವ ಇಲಾಖೆ ವಸತಿ ಗೃಹದಲ್ಲಿ ವಾಸವಿತ್ತು.
ಇದನ್ನೂ ಓದಿ > > ಶಿವಮೊಗ್ಗ ಜಿಲ್ಲೆ ಬಂದ್ ಅನಿವಾರ್ಯ, ಕಲ್ಲೂರು ಮೇಘರಾಜ್
ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮೃತರ ಸ್ವಂತ ಜಮೀನಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಇದನ್ನೂ ಓದಿ > > ಟ್ರಾಫಿಕ್ ಪೊಲೀಸರ ಖಡಕ್ ಕಾರ್ಯಾಚರಣೆ, ಹಣ್ಣಿನ ಅಂಗಡಿಗಳ ತೆರವು!














