ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯ ಕೃಷ್ಣಾ ಕೆಫೆ ಸಮೀಪ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > >ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ!
ಕೃಷ್ಣಾ ಕೆಫೆ ಸಮೀಪದ ಬಿ.ಹೆಚ್. ರಸ್ತೆಯಲ್ಲಿ ವೃದ್ಧರು ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಬಸ್ ಏಕಾಏಕಿ ವೃದ್ಧರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವೃದ್ಧರು ರಸ್ತೆಗೆ ಬಿದ್ದಿದ್ದು, ಬಸ್‌ನ ಚಕ್ರಗಳ ಸಮೀಪ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ವೃದ್ಧರು ಬಸ್ಸಿನ ಅಡಿಯಲ್ಲಿ ಸಿಲುಕಿರುವುದನ್ನು ಗಮನಿಸಿದ ಸ್ಥಳೀಯರು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಬಳಿಕ ಸಾರ್ವಜನಿಕರು ಹರಸಾಹಸಪಟ್ಟು ಬಸ್ಸಿನ ಅಡಿಯಲ್ಲಿ ಸಿಲುಕಿದ್ದ ವೃದ್ಧರನ್ನು ಹೊರತೆಗೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ವೃದ್ಧರನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಇದನ್ನೂ ಓದಿ > >ಶಿವಮೊಗ್ಗದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮ, ಭಾಸ್ಕರ್ ಜಿ.ಕಾಮತ್ ಹೇಳಿದ್ದೇನು?
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ > >ಶಿವಮೊಗ್ಗ, ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ, 17,000 ದಂಡ, ಏನಿದು ಕೇಸ್?














