• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 18, 2026
in ಶಿವಮೊಗ್ಗ
ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ
Share on FacebookShare on TwitterShare on WhatsApp

ಶಿವಮೊಗ್ಗ: ಕಳಂಕದ ಆರೋಪ ಹೊತ್ತಿರುವ ಸಚಿವ ಬಿ.ನಾಗೇಂದ್ರ ಅವರ ಪದಚ್ಯುತಿಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ  ರಾಜ್ಯ ಬಿಜೆಪಿ ಅಧ್ಯಕ್ಷರ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿತ್ತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾತ್ರಿಯು ಪ್ರತಿಭಟನೆ ಮುಂದುವರೆಸಿದರು. ಸಚಿವ ನಾಗೇಂದ್ರ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಇದನ್ನೂ ಓದಿ > > ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ, ರಕ್ಷಿಸಿದ ಯುವಕರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇದೇ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನಲಾಗಿದ್ದು ಅದರಲ್ಲಿ ನಾಗೇಂದ್ರ ಅವರು 88 ಕೋಟಿ ರೂ.ಗಳನ್ನು ತಮ್ಮ ಸ್ವಂತಕ್ಕೆ ಬಳಸಿದ್ದರ ಬಗ್ಗೆ ತನಿಖೆಯಿಂದ ಬೆಳಕಿಗೆ ಬಂದಿದೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ಅಮಾನತು ಸೇರಿದಂತೆ ನಾಗೇಂದ್ರ ಅವರೇ ರಾಜೀನಾಮೆ ನೀಡಿದ್ದರು. ಆದರೆ, ಮತ್ತೆ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಪರಿಶಿಷ್ಟರ ಅನುದಾನವನ್ನು ನುಂಗಿ ನೀರು ಕುಡಿದ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಯಾವ ನೈತಿಕ ಹೊಣೆ ಹೊತ್ತು ಅವರನ್ನು ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ > > ಕೊಡಚಾದ್ರಿ ಬೆಟ್ಟದಲ್ಲಿ ದುರಂತ, 60 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರವಾಸಿಗ!, ಆಗಿದ್ದೇನು?

ಈಗಾಗಲೇ ಅವರು ಜೈಲಿಗೆ ಹೋಗಿ ಬಂದಿದ್ದು ನ್ಯಾಯಾಲಯದಲ್ಲಿ ಮತ್ತು ಇಡಿ ಯಲ್ಲಿ ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ಆದರೂ ಅವರನ್ನು ಮತ್ತೆ ಮಂತ್ರಿ ಮಾಡಿದ ಕಾರಣ ಏನು? ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಿದ್ದ 187 ಕೋಟಿ ರೂ.ಗಳನ್ನು ಸಚಿವ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ತಾನು ಶಿವಮೊಗ್ಗದಲ್ಲಿ ಆತ್ಮ ಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದರು ಎಂದ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಇನ್ನೂ ದೊರಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ವೇಳೆ ತಮಗೆ ಸಚಿವ ಸ್ಥಾನ ನೀಡದಿದ್ದರೆ ವಾಲ್ಮೀಕಿ ಹಗರಣದ ವಿವರಗಳನ್ನು ಬಯಲಿಗೆ ಎಳೆಯುತ್ತೇನೆ ಎಂದು ಬಿ.ನಾಗೇಂದ್ರ ಕಾಂಗ್ರೆಸ್ ಹೈ ಕಮಾಂಡ್ ಗೆ ಬ್ಲಾಕ್ ಮೇಲ್ ಮಾಡಿದ್ರಾ? ಅದಕ್ಕೆ ಹೆದರಿ ಕಳಂಕಿತ ಆರೋಪ ಹೊತ್ತಿರುವ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ರಾ ಎಂದು ಪ್ರಶ್ನಿಸಿದ ಅವರು ಈ ಗಂಭೀರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಹೈ ಕಮಾಂಡ್ ನಾಗೇಂದ್ರಗೆ ಸಚಿವ ಸ್ಥಾನ ನೀಡಿದೆ ಎಂದು ಆಪಾದಿಸಿದರು.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

ಅನಿರ್ಧಿಷ್ಟಾವಧಿ ಧರಣಿಯಲ್ಲಿ ಪ್ರಮುಖರಾದ ಆರ್.ಕೆ. ಸಿದ್ಧರಾಮಣ್ಣ, ಹರಿಕೃಷ್ಣ, ಮೋಹನ್ ರೆಡ್ಡಿ, ಜ್ಯೋತಿ ಪ್ರಕಾಶ್, ಮಾಲತೇಶ್, ಗಣೇಶ್ ಬಿಳಕಿ, ವಿನ್ಸೆಂಟ್ ರೋಡ್ರಿಗಸ್, ಹರೀಶ್, ಸಂತೋಷ್, ಸುರೇಖಾ ಮುರಳೀಧರ, ಹರೀಶ್, ಚಂದ್ರಶೇಖರ್, ಮಂಜುನಾಥ್, ಶ್ರೀನಾಗ್ ಮೊದಲಾದವರಿದ್ದರು.

Tags: BJPkannada news livelatest newsmalnad newsProtests continued at the DC office premises in Shivamogga even into the nightshimogaSHIVAMOGABJPshivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

Next Post

ಕುವೆಂಪು ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಕುವೆಂಪು ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL