ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಗೋ ಕಳ್ಳತನ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ ಇಂದು ಶಿಕಾರಿಪುರ ಬಂದ್‌ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿರುವ ಈ ಬಂದ್‌ಗೆ ಶಿಕಾರಿಪುರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇದನ್ನೂ ಓದಿ > > ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?
ಬೆಳಿಗ್ಗೆ ಕ್ಯಾಂಟೀನ್, ಟೀ ಶಾಪ್ ಗಳು ಸೇರಿದಂತೆ ಕೆಲವು ಅಂಗಡಿಗಳು ಎಂದಿನಂತೆ ತೆರೆದಿದ್ದವು. ಗ್ರಾಹಕರು ಕೂಡ ಬಂದು ಹೋಗುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು, ಶಾಲಾ-ಕಾಲೇಜು ವಾಹನಗಳು ಸೇರಿದಂತೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಆದರೆ ಪ್ರಮುಖ ರಸ್ತೆಗಳಲ್ಲಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ತೆರೆದಿದ್ದ ಕೆಲವು ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡಿಸುತ್ತಿರುವುದು ಕಂಡುಬಂದಿದೆ.
ಇದನ್ನೂ ಓದಿ > > ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ, ಇಲ್ಲಿದೆ ಡೀಟೇಲ್ಸ್
ಬಂದ್ ಹಿನ್ನೆಲೆಯಲ್ಲಿ ಶಿಕಾರಿಪುರದ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಸಂಘಟನೆಗಳು ಯೋಜಿಸಿವೆ. ಮೆರವಣಿಗೆಯು ಶಿರಾಳಕೊಪ್ಪ ಸರ್ಕಲ್ (ಅಕ್ಕಮಹಾದೇವಿ ಸರ್ಕಲ್)ವರೆಗೆ ಸಾಗಲಿದ್ದು, ಬಳಿಕ ಅಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.
ಇದನ್ನೂ ಓದಿ > > ಸಾಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!
ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿಕಾರಿಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳು, ಸರ್ಕಲ್‌ಗಳು, ಬಸ್ ನಿಲ್ದಾಣ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ














