ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.
ಇದನ್ನೂ ಓದಿ > > ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?
ಬಸ್ಸು ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೂಡ್ಲಿಗೆರೆ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಬಸ್ ರಸ್ತೆ ಪಕ್ಕದಲ್ಲಿದ್ದ ಅಡಿಕೆ ತೋಟಕ್ಕೆ ನುಗ್ಗಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.
ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ > > ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > > ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!














