ಶಿವಮೊಗ್ಗ : ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಭೀಕರ ಅಪಘಾತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.
ಇದನ್ನೂ ಓದಿ > > ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು? ‘
ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಸಂಚರಿಸುತ್ತಿದ್ದ ಬಸ್ ತೋಟಕ್ಕೆ ನುಗ್ಗಿದ ರಭಸಕ್ಕೆ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅರಬಿಳಚಿ ಗ್ರಾಮದ ರಾಜಪ್ಪ (44) ಎಂಬುವವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ > > ದಿನಕ್ಕೊಂದು ಕಥೆ | ತಪ್ಪು ತೋರಿಸುವವರು ಅನೇಕ, ಸರಿಪಡಿಸುವವರು ಯಾರು?
ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!














