ಶಿವಮೊಗ್ಗ : ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಸರ್ಕಾರಿ ಆಸ್ತಿಗೆ ಹಾನಿ ಉಂಟುಮಾಡಿದ ಆರೋಪದ ಮೇಲೆ ಐವರು ವಿಚಾರಣಾಧೀನ ಖೈದಿಗಳ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > > ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!
ಜೈಲಿನಲ್ಲಿ ಅಳವಡಿಸಲಾಗಿದ್ದ ಪ್ರಿಸನ್ ಕಾಲ್ ಸಿಸ್ಟಂ (PCS) ಉಪಕರಣದ ಪರದೆಯನ್ನು ಖೈದಿಗಳು ಜಖಂ ಗೊಳಿಸಿದ್ದಾರೆ.
ಕಾರಾಗೃಹದಲ್ಲಿರುವ ಕೈದಿಗಳು ತಮ್ಮ ಕುಟುಂಬದ ಸದಸ್ಯರು ಹಾಗೂ ವಕೀಲರೊಂದಿಗೆ ಮಾತನಾಡಲು ಅನುಕೂಲವಾಗುವಂತೆ ಒಟ್ಟು 10 ಪ್ರಿಸನ್ ಕಾಲ್ ಸಿಸ್ಟಂ ಉಪಕರಣಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ ಪ್ರತಿಯೊಂದು ಉಪಕರಣದ ಮೌಲ್ಯ 1,64,295 ಆಗಿದೆ. ಕಾರಾಗೃಹದ ‘ಕುಮುದ್ವತಿ’ ವಿಭಾಗದಲ್ಲಿದ್ದ ಪಿಸಿಎಸ್ ಬೂತ್ಗೆ ಪ್ರವೇಶಿಸಿದ ವಿಚಾರಣಾಧೀನ ಕೈದಿಗಳು, ಉಪಕರಣದ ಪರದೆಯನ್ನು ಒಡೆದು ಹಾನಿಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಈ ಕುರಿತು ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಪಿ. ಅವರು ನೀಡಿರುವ ದೂರಿನನ್ವಯ ತುಂಗಾನಗರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗೆ ಹಾನಿ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 324(3), 324(5) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ > > 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು














