ಶಿವಮೊಗ್ಗ: ಮುಂಬರುವ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ.
ಇದನ್ನೂ ಓದಿ > > ಶಿವಮೊಗ್ಗ ಜೈಲಿನಲ್ಲಿ 1.64 ಲಕ್ಷ ಮೌಲ್ಯದ ಉಪಕರಣಕ್ಕೆ ಹಾನಿ, ಆಗಿದ್ದೇನು?
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಮಾರ್ಗದರ್ಶನದಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಸಿಪಿಐ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಸೋಮಿನಕೊಪ್ಪದಲ್ಲಿ ’ರೂಟ್ ಮಾರ್ಚ್’ (ಪಥಸಂಚಲನ) ನಡೆಸಿದರು.
ಸೋಮಿನಕೊಪ್ಪ, ಸೋಮಿನಕೊಪ್ಪ ಭೋವಿ ಕಾಲೋನಿಯ ಪ್ರಮುಖ ರಸ್ತೆಗಳಲ್ಲಿ ’ರೂಟ್ ಮಾರ್ಚ್’ ಪಥಸಂಚಲನ ನಡೆಸಿ ಸಾರ್ವಜನಿಕರು ಆತಂಕವಿಲ್ಲದೆ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಅಥವಾ ಸಮಾಜದ ಸ್ವಾಸ್ಥ್ಯ ಕದಡುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ರವಾನಿಸಿದೆ. ಹಬ್ಬದ ದಿನಗಳಂದು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ > > 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು














