ಶಿವಮೊಗ್ಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕರಾಗಿ ಶಿವಮೊಗ್ಗದ ಸಿ.ಜಿ. ಮಧುಸೂದನ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾದ್ಯಂತ ‘ಭಾರತ ಜೋಡೋ ಯುವ ಸಂಘ’ಗಳ ರಚನೆ, ಯುವಕರ ನೋಂದಣಿ ಹಾಗೂ ಸಂಘಟನಾ ಚಟುವಟಿಕೆಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಂಘಟನೆಯನ್ನು ರಾಜ್ಯಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಸಕ್ರಿಯಗೊಳಿಸುವ ಉದ್ದೇಶದಿಂದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಮತ್ತು ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ರಾಜ್ಯ ಸಂಯೋಜಕರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಅವರು ಹೊರಡಿಸಿರುವ ಆದೇಶದಂತೆ ನಾಗೇಶ್ ಕರಿಯಪ್ಪ, ಸಿ.ಜಿ. ಮಧುಸೂದನ್ ಹಾಗೂ ಸಿದ್ದು ಹಾಲೇಗೌಡ ಅವರನ್ನು ರಾಜ್ಯ ಸಂಯೋಜಕರಾಗಿ ನೇಮಕ ಮಾಡಲಾಗಿದೆ.
ಸಿ.ಜಿ. ಮಧುಸೂದನ್ ಅವರಿಗೆ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ‘ಭಾರತ ಜೋಡೋ ಯುವ ಸಂಘ’ಗಳನ್ನು ರಚಿಸುವುದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಸಂಘಟನೆಯಲ್ಲಿ ನೋಂದಾಯಿಸುವುದು ಹಾಗೂ ಕಾಂಗ್ರೆಸ್ ಯುವ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವ ಜವಾಬ್ದಾರಿಯನ್ನು ರಾಜ್ಯ ಸಂಯೋಜಕರಿಗೆ ನೀಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಯುವಕರನ್ನು ಒಗ್ಗೂಡಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ > > 30ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನ, ಪ್ರಾಣ ಉಳಿಸಿದ 112 ಪೊಲೀಸ್ ಸಿಬ್ಬಂದಿ!
2010ರಿಂದ ಸಂಘಟನೆಯಲ್ಲಿ ಸಕ್ರಿಯ
ಸಿ.ಜಿ. ಮಧುಸೂದನ್ ಅವರು 2010ರಿಂದಲೇ ವಿದ್ಯಾರ್ಥಿ ಸಂಘಟನೆಯಾದ ಎನ್ಎಸ್ಯುಐನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ಬಳಿಕ ಎನ್ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಶಿವಮೊಗ್ಗ ಯೂತ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.
ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸಿ.ಜಿ. ಮಧುಸೂದನ್ ಅವರ ಸಂಘಟನಾ ಅನುಭವವನ್ನು ಪರಿಗಣಿಸಿ ಇದೀಗ ರಾಜ್ಯ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಹೊಸ ಜವಾಬ್ದಾರಿಯೊಂದಿಗೆ ರಾಜ್ಯದ 11 ಜಿಲ್ಲೆಗಳಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಮಹತ್ವದ ಹೊಣೆಗಾರಿಕೆ ಅವರ ಹೆಗಲೇರಿದೆ.
ಇದನ್ನೂ ಓದಿ > > ಭದ್ರಾವತಿ | ಗಾಂಜಾ ಮಾರಾಟ, ಇಬ್ಬರು ಆರೋಪಿಗಳ ಬಂಧನ, 627 ಗ್ರಾಂ ಗಾಂಜಾ ವಶ














