ಶಿವಮೊಗ್ಗ: ಸಾಗರ ತಾಲೂಕಿನ ಮಡಸೂರು ಗ್ರಾಮದ ವಡ್ಡಿನಕೆರೆ ಸಮೀಪ, ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಆನಂದ್ (38) ಎಂದು ಎಂದು ಗುರುತಿಸಲಾಗಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ > > ಯುವ ಕಾಂಗ್ರೆಸ್ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ನೇಮಕ
ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ > > ಶಿವಮೊಗ, 3ನೇ ದಿನಕ್ಕೆ ಕಾಲಿಟ್ಟ ಶೋಧ, ಪತ್ತೆಯಾಗದ ಇಬ್ಬರು ಮಕ್ಕಳ ಸುಳಿವು!
ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಸ್ಥಳಕ್ಕೆ ಪೊಲೀಸ್ ಉಪಾಧೀಕ್ಷಕರು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.














