• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ!

ಯುವಶಕ್ತಿಯ ಜಾಗೃತ ಹೆಜ್ಜೆ ಸ್ವಾಸ್ಥ್ಯ ಸಮಾಜದ ಮುನ್ನಡೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 30, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ!
Share on FacebookShare on TwitterShare on WhatsApp
ಶಿವಮೊಗ್ಗ: ಅಧಿಕಾರಶಾಹಿ ಹಾಗೂ ಭ್ರಷ್ಟ ವ್ಯವಸ್ಥೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಯುವ ಸಮೂಹದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ವಿವಿಧ ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > > ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!
ಯುವಶಕ್ತಿ ಗಾಂಧೀ ಮಾರ್ಗದ ಮೂಲಕ ನಡೆಸುತ್ತಿರುವ ಹೋರಾಟಗಳು, ಸರ್ಕಾರಗಳನ್ನು ಎಚ್ಚರಿಸುವ ಹಾಗೂ ವ್ಯವಸ್ಥೆಯನ್ನು ಅಲುಗಾಡಿಸುವಲ್ಲಿ ಯಶಸ್ವಿಯಾಗಿವೆ.  ಮಹಾಭಾರತ ಮತ್ತು ರಾಮಾಯಣಗಳು ಎಲ್ಲಿಯವರೆಗೆ ಪ್ರಸ್ತುತವಾಗಿರುತ್ತವೆಯೋ, ಅಲ್ಲಿಯವರೆಗೆ ಗಾಂಧೀ ಮಾರ್ಗವೂ ಪ್ರಸ್ತುತವಾಗಿರುತ್ತದೆ ಎಂದರು.
ಶಿಕ್ಷಣ ಪಡೆದವರಿಂದಲೇ ವ್ಯವಸ್ಥೆಗೆ ಸವಾಲುಗಳು ಎದುರಾಗುತ್ತಿರುವುದು ವಿಷಾದನೀಯ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು, ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತವೆ. ಹೀಗಾಗಿ ಯುವಕರು ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಜೀವನದ ಮೌಲ್ಯಗಳನ್ನಾಗಿಸಿಕೊಂಡು, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.
ಸುಶಿಕ್ಷಿತರಾಗುವುದರ ಜೊತೆಗೆ ಸುಸಂಸ್ಕೃತರಾಗಬೇಕು. ಪೋಷಕರ ಆಶಯಗಳನ್ನು ಸದಾ ಗೌರವಿಸುವುದರೊಂದಿಗೆ, ಜ್ಞಾನಕ್ಕಿಂತಲೂ ಮಿಗಿಲಾದ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿ, ಸಮಾಜಕ್ಕೆ ಬೆಳಕಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ರೂಪಿಸಿದ್ದ ಎಲೆಕ್ಟ್ರಾನಿಕ್ಸ್ ಸರ್ಕ್ಯೂಟ್‌ ಆಧಾರಿತವಾಗಿ ವಿನ್ಯಾಸಗೊಂಡ ದೀಪಸ್ತಂಭವನ್ನು ಅತಿಥಿಗಳು ಮೊಬೈಲ್ ಆ್ಯಪ್ ಮೂಲಕ ಬಟನ್ ಒತ್ತಿ ದೀಪ ಬೆಳಗಿಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ದೂರದೃಷ್ಟಿಯ ಫಲವಾಗಿ ಸ್ಥಾಪನೆಯಾದ ಸಂಸ್ಥೆ, ಇಂದಿಗೂ ಅದೇ ಧ್ಯೇಯೋದ್ದೇಶಗಳೊಂದಿಗೆ ಸಮಾಜದ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿದೆ. ಸಮಾಜದ ಅಗತ್ಯವನ್ನು ಅರಿತು ಹಿರಿಯರು ಕಾಲಕಾಲಕ್ಕೆ ವಿವಿಧ ವಿಷಯಗಳನ್ನು ಹೊಂದಿದ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿರುವುದು ಸಂಸ್ಥೆಯ ವಿಶೇಷತೆ.
ಶಿಕ್ಷಣವು ಕೇವಲ ಕೊಠಡಿಯ ಕಲಿಕೆಗೆ ಸೀಮಿತವಾಗದೆ, ಪ್ರಯೋಗ, ಸಂಶೋಧನೆ ಹಾಗೂ ಆವಿಷ್ಕಾರದ ಮೂಲಕ ವಿಸ್ತರಿಸಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಯೋಗಾಲಯದ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿ, ಆವಿಷ್ಕಾರಿ ಮನೋಭಾವದೊಂದಿಗೆ ಕಲಿಯುವುದನ್ನು ರೂಢಿಸಿಕೊಳ್ಳಬೇಕು. ಅದುವೇ ವೃತ್ತಿಪರ ಶಿಕ್ಷಣದ ಮುಖ್ಯ ಲಕ್ಷಣ.
ವಿದ್ಯಾರ್ಥಿಗಳ ಕಲ್ಪನೆಗಳಿಗೆ ಉತ್ಪನ್ನದ ರೂಪ ನೀಡಲು ಕಾಲೇಜಿನಲ್ಲಿ ಐಡಿಯಾ ಲ್ಯಾಬ್‌ನಂತಹ ನಾವೀನ್ಯ ಉತ್ಪನ್ನ ನಿರ್ಮಾಣ ವೇದಿಕೆಗಳನ್ನು ರೂಪಿಸಲಾಗಿದೆ. ಅಂತಹ ವೇದಿಕೆಗಳನ್ನು ಪರಿಣಾಕಾರಿಯಾಗಿ ಬಳಸಿಕೊಳ್ಳಿ. ಅಂಕಗಳಿಗಿಂತ ಜ್ಞಾನ, ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವಕ್ಕೆ ಆದ್ಯತೆ ನೀಡಿ. ಇದರಿಂದ ಉದ್ಯೋಗಾವಕಾಶದ ಯಶಸ್ಸು ಸಾಧಿಸಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಸ್ಟಾರ್ಟ್‌ಅಪ್‌ಗಳ ನಿರ್ಮಾಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಗೆ ಇಂಜಿನಿಯರಿಂಗ್ ಶಿಕ್ಷಣವು ಭದ್ರ ಬುನಾದಿಯಾಗಲಿ ಎಂದು ಆಶಿಸಿದರು.
ಇದನ್ನೂ ಓದಿ > > 2028ರ ಚುನಾವಣೆಗೆ ಈಶ್ವರಪ್ಪ ಕುಟುಂಬ ಸಜ್ಜು; ಶಿವಮೊಗ್ಗ ನಗರದಿಂದ ಸ್ಪರ್ಧೆ ಶೇ.100 ಖಚಿತ!

ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ

ಕಾಲೇಜಿಗೆ ಹೊಸ ಹೆಜ್ಜೆಯಿಟ್ಟ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು, ಅಂತಿಮ ವರ್ಷದ ಎಐ ವಿದ್ಯಾರ್ಥಿಗಳು ನಿರ್ಮಿಸಿದ ರೋಬೋ ಆತ್ಮೀಯವಾಗಿ ಸ್ವಾಗತಿಸಿತು.
ಇದರೊಂದಿಗೆ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ನಾವೀನ್ಯಮಯ ಯೋಜನೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕೈ ಸನ್ನೆಗಳ ಮೂಲಕ ಬ್ಲೂಟೂತ್‌ ಬಳಸಿ ನಿಯಂತ್ರಿಸಬಹುದಾದ ರೊಬೊಟಿಕ್ ಆರ್ಮ್, ದೃಷ್ಟಿಹೀನರು ಹಾಗೂ ಸವಾರರಿಗೆ ನೈಜ ಸಮಯದ ವಸ್ತು ಪತ್ತೆ ಮತ್ತು ಧ್ವನಿ ಮಾರ್ಗದರ್ಶನ ನೀಡುವ ಎಐ ಸ್ಮಾರ್ಟ್ ಹೆಲ್ಮೆಟ್, ತಂತ್ರಜ್ಞಾನದ ನೆರವಿನಿಂದ ಪ್ರಜ್ವಲಿಸಿದ ದೀಪಸ್ತಂಭ, ಜೈವಿಕ ಇಂಧನದ ಪ್ರಯೋಗಗಳು ನೋಡುಗರನ್ನು ಆಕರ್ಷಿಸಿತು. ಕೆನರಾ ಬ್ಯಾಂಕ್ ಸಿಬ್ಬಂದಿಗಳು ಶಿಕ್ಷಣ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಂ.ಎಸ್ ಅನಂತದತ್ತಾ, ಎಂ.ಆರ್.ಸೀತಾಲಕ್ಷ್ಮೀ, ಜಿ.ಎನ್.ಸುಧೀರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಸ್ವಾಗತಿಸಿ, ಪ್ರವೇಶಾತಿ ಸಮಿತಿ ಮುಖ್ಯಸ್ಥರಾದ ಡಾ.ಮೊಯಿನುದ್ದಿನ್ ಖಾನ್ ವಂದಿಸಿ, ಡಾ.ಎಚ್.ಬಿ.ಸುರೇಶ್ ನಿರೂಪಿಸಿದರು.
Tags: 'Abhivinyasa' program at JNNCE Collegekannada newskannada news livelatest newsmalnad newsRobot welcomes students!shimogaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

2028ರ ಚುನಾವಣೆಗೆ ಈಶ್ವರಪ್ಪ ಕುಟುಂಬ ಸಜ್ಜು; ಶಿವಮೊಗ್ಗ ನಗರದಿಂದ ಸ್ಪರ್ಧೆ ಶೇ.100 ಖಚಿತ!

Next Post

ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL