• About Us
  • Advertise
  • Privacy & Policy
  • Contact Us
Tuesday, September 8, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನಕ್ಕೆ ಆಗ್ರಹ: ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 8, 2026
in ಶಿವಮೊಗ್ಗ
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!
Share on FacebookShare on TwitterShare on WhatsApp

ಶಿಕಾರಿಪುರ: 1995ರ ನಂತರ ಆರಂಭಗೊಂಡಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಶಿಕಾರಿಪುರದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರೊಬ್ಬರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ತಮ್ಮ ರಕ್ತದಲ್ಲಿ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಶಿಕ್ಷಕ ಪ್ರಶಾಂತ್ ಅವರು ಸಿರಿಂಜ್ ಮೂಲಕ ತಮ್ಮ ರಕ್ತವನ್ನು ತೆಗೆದುಕೊಂಡು, ಅದೇ ರಕ್ತದಿಂದ ಪತ್ರ ಬರೆದಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವ ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಈ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ಅನುದಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ

1995ರ ನಂತರ ಆರಂಭಗೊಂಡಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ಹಲವು ವರ್ಷಗಳಿಂದ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರು ಅನುದಾನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ಶಿಕ್ಷಕರು ಬೆಂಗಳೂರಿನಲ್ಲಿ ಹಲವು ಬಾರಿ ಪ್ರತಿಭಟನೆ, ಧರಣಿ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ನಡೆಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕಲ್ಪಿಸುವ ಕುರಿತು ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ತಮ್ಮ ಬೇಡಿಕೆ ಈಡೇರಿಲ್ಲ ಎಂದು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ > >  ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

‘ನನ್ನ ರಕ್ತದಲ್ಲೇ ಕನ್ನಡವಿದೆ’ ಹೇಳಿಕೆಗೆ ಪ್ರತಿಕ್ರಿಯೆ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ‘ನನ್ನ ರಕ್ತದಲ್ಲೇ ಕನ್ನಡವಿದೆ’ ಎಂದು ಹೇಳಿದ್ದನ್ನು ನೆನಪಿಸಿಕೊಂಡಿರುವ ಶಿಕ್ಷಕ ಪ್ರಶಾಂತ್, ಇದೇ ಕಾರಣಕ್ಕೆ ಸಚಿವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆಯನ್ನು ತಲುಪಿಸುತ್ತಿರುವುದಾಗಿ ಹೇಳಿದ್ದಾರೆ.

“ನನ್ನ ರಕ್ತದಲ್ಲೇ ಕನ್ನಡವಿದೆ ಎಂದು ಸಚಿವ ಮಧು ಬಂಗಾರಪ್ಪ ಈ ಹಿಂದೆ ಹೇಳಿದ್ದರು. ಇದೇ ಕಾರಣಕ್ಕಾಗಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುತ್ತಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಅನುದಾನವಿಲ್ಲದೆ ಕನ್ನಡ ಮಾಧ್ಯಮ ಶಾಲೆಗಳಿಗೆ ರಕ್ತವೇ ಇಲ್ಲದಂತಾಗಿದೆ.” ಎಂದು ಶಿಕ್ಷಕ ಪ್ರಶಾಂತ್ ಹೇಳಿದ್ದಾರೆ.

ಬೇಡಿಕೆ ಈಡೇರದಿದ್ದರೆ ನವೆಂಬರ್ 1ರಂದು ಮತ್ತೊಂದು ಹೋರಾಟ

ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಆಗ್ರಹಿಸಿದ್ದಾರೆ.

ತಾವು ಸ್ವತಃ ತಮ್ಮ ರಕ್ತದಿಂದ ಪತ್ರ ಬರೆದು ಸರ್ಕಾರದ ಗಮನ ಸೆಳೆದಿರುವುದಾಗಿ ತಿಳಿಸಿರುವ ಅವರು, ಬೇಡಿಕೆ ಈಡೇರದಿದ್ದರೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಕನ್ನಡ ಮಾಧ್ಯಮ ಶಾಲೆಗಳ ಇತರ ಶಿಕ್ಷಕರೂ ತಮ್ಮ ರಕ್ತದಿಂದಲೇ ಪತ್ರ ಬರೆಯುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ > >  ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡು, 1995ರ ನಂತರ ಆರಂಭಗೊಂಡಿರುವ ಶಾಲೆಗಳಿಗೆ ಅನುದಾನ ಕಲ್ಪಿಸಬೇಕು. ಶಿಕ್ಷಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬುದು ಶಿಕ್ಷಕರ ಪ್ರಮುಖ ಬೇಡಿಕೆಯಾಗಿದೆ.

ರಕ್ತದಲ್ಲಿ ಪತ್ರ ಬರೆಯುವ ಮೂಲಕ ಶಿಕ್ಷಕ ಪ್ರಶಾಂತ್ ನಡೆಸಿರುವ ಪ್ರತಿಭಟನೆ ಇದೀಗ ಶಿಕಾರಿಪುರದಲ್ಲಿ ಗಮನ ಸೆಳೆದಿದ್ದು, ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಈ ಕುರಿತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Tags: GOVT SCHOOLkannada newskannada news livelatest newsmadhubangarappamalnad newsShikaripura teacher Prashant wrote a letter in blood to the Education Minister!shimogashivamoggaಶಿವಮೊಗ್ಗ
Previous Post

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

Next Post

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

September 8, 2026
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

September 8, 2026

Copyright © 2026 Yuva Dhwani. Designed by KIPL