• About Us
  • Advertise
  • Privacy & Policy
  • Contact Us
Wednesday, September 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಮೃಗಾಲಯಕ್ಕೆ 8 ತೋಳ, 4 ಘರಿಯಾಲ್‌ಗಳ ಆಗಮನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 9, 2026
in ಶಿವಮೊಗ್ಗ
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ
Share on FacebookShare on TwitterShare on WhatsApp

ಶಿವಮೊಗ್ಗ: ತ್ಯಾವರೆಕೊಪ್ಪದ  ಹುಲಿ – ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಬಿಹಾರದ ಪಟ್ನಾದಲ್ಲಿರುವ ಸಂಜಯ್ ಗಾಂಧಿ ಜೈವಿಕ ಉದ್ಯಾನವನದಿಂದ 8 ತೋಳಗಳು ಹಾಗೂ 4 ಘರಿಯಾಲ್‌ಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಅಮರನಾಥ್ ಬಿ.ಎಂ. ತಿಳಿಸಿದ್ದಾರೆ.

ಕೇಂದ್ರ ಮೃಗಾಲಯ ಪ್ರಾಧಿಕಾರದ (CZA) ಅನುಮೋದನೆಯೊಂದಿಗೆ ಪಟ್ನಾ ಮೃಗಾಲಯದಿಂದ ಪ್ರಾಣಿಗಳನ್ನು ತರಲಾಗಿದ್ದು, ಇದಕ್ಕೆ ಪ್ರತಿಯಾಗಿ ಶಿವಮೊಗ್ಗ ಮೃಗಾಲಯದಿಂದ ಎರಡು ಗಂಡು ಕಾಡುಕೋಣಗಳನ್ನು ನೀಡಲಾಗಿದೆ. ಪ್ರಾಣಿ ವಿನಿಮಯ ಯೋಜನೆಯು ಮೃಗಾಲಯದಲ್ಲಿನ ಜೀವವೈವಿಧ್ಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ > > ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ಪಟ್ನಾದಿಂದ ತರಲಾದ 8 ತೋಳಗಳ ಪೈಕಿ 5 ತೋಳಗಳನ್ನು ಸುಮಾರು ಮೂರು ವಾರಗಳ ಕಾಲ ಪ್ರತ್ಯೇಕವಾಗಿ ಸೂಕ್ತ ನಿಗಾ, ತರಬೇತಿ ಹಾಗೂ ಅಗತ್ಯ ಆರೈಕೆಯಲ್ಲಿರಿಸಲಾಗಿತ್ತು. ಹೊಸ ಪರಿಸರಕ್ಕೆ ಅವುಗಳು ಹೊಂದಿಕೊಳ್ಳುವಿಕೆ ಹಾಗೂ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಇದೀಗ ಪ್ರವಾಸಿಗರ ವೀಕ್ಷಣೆಗಾಗಿ ಪ್ರದರ್ಶನ ಆವರಣಕ್ಕೆ ಬಿಡಲಾಗಿದೆ.
ಹೊಸ ಪ್ರಾಣಿಗಳ ಸೇರ್ಪಡೆಯಿಂದ ಶಿವಮೊಗ್ಗ ಮೃಗಾಲಯದಲ್ಲಿರುವ ಪ್ರಾಣಿ ತಳಿಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಈ ಮೂಲಕ ಮೃಗಾಲಯವು ಶೀಘ್ರದಲ್ಲೇ ‘ಚಿಕ್ಕ ಮೃಗಾಲಯ’ (Small Zoo) ವಿಭಾಗದಿಂದ ‘ಮಧ್ಯಮ ಮೃಗಾಲಯ’ (Medium Zoo) ವಿಭಾಗಕ್ಕೆ ಮೇಲ್ದರ್ಜೆಗೇರುವ ನಿರೀಕ್ಷೆಯಿದೆ.

ಇದನ್ನೂ ಓದಿ > > ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

ಇದೇ ವೇಳೆ, ಪಟ್ನಾ ಮೃಗಾಲಯದಿಂದ ತರಲಾಗಿರುವ ನಾಲ್ಕು ಘರಿಯಾಲ್‌ಗಳಿಂದಾಗಿ ಶಿವಮೊಗ್ಗ ಮೃಗಾಲಯದ ಘರಿಯಾಲ್‌ಗಳ ಸಂಗ್ರಹವೂ ಹೆಚ್ಚಾಗಿದೆ. ಅಪರೂಪದ ಹಾಗೂ ವಿಶಿಷ್ಟ ಪ್ರಾಣಿ-ಪಕ್ಷಿಗಳ ಸಂರಕ್ಷಣೆ, ಸಂತಾನೋತ್ಪತ್ತಿ ಮತ್ತು ಸಾರ್ವಜನಿಕರಿಗೆ ವನ್ಯಜೀವಿ ಕುರಿತು ಅರಿವು ಮೂಡಿಸುವ ಕಾರ್ಯಕ್ಕೆ ಈ ಹೊಸ ಸೇರ್ಪಡೆ ಮತ್ತಷ್ಟು ಬಲ ನೀಡಲಿದೆ.
ಹೊಸ ತೋಳಗಳನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶ ಕಲ್ಪಿಸಿರುವುದರಿಂದ ತ್ಯಾವರೆಕೊಪ್ಪದ ಸಫಾರಿಗೆ ಆಗಮಿಸುವ ಪ್ರವಾಸಿಗರಿಗೆ ಮತ್ತೊಂದು ವಿಶೇಷ ಆಕರ್ಷಣೆ ದೊರೆತಂತಾಗಿದೆ.

Tags: kannada newskannada news livelatest newsNew guests arrive at Shivamogga Lion Sanctuaryʼshimogashivamoga lion safarishivamoggaಶಿವಮೊಗ್ಗ
Previous Post

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

Next Post

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

September 9, 2026
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

September 9, 2026
ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

September 9, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

September 9, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

September 9, 2026
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

September 9, 2026

Copyright © 2026 Yuva Dhwani. Designed by KIPL