ಶಿವಮೊಗ್ಗ: 2026-27ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತ /ರೈತ ಮಹಿಳೆಯರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಇದನ್ನೂ ಓದಿ > > ಶಿಕಾರಿಪುರದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತದೇಹ!
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ದಿ:30/09/2026 ರ ಸಂಜೆ 5:30 ರೊಳಗೆ ಸಲ್ಲಿಸುವುದು.
ಅಗತ್ಯ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಯವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.














