• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹಾರನಹಳ್ಳಿ  ರೈಲ್ವೆ ಪ್ಲಾಟ್‌ಫಾರ್ಮ್ ಅಭಿವೃದ್ಧಿಗೆ ಗುದ್ದಲಿ ಪೂಜೆ, ಸಂಸದ ರಾಘವೇಂದ್ರ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 18, 2026
in ಶಿವಮೊಗ್ಗ
ಹಾರನಹಳ್ಳಿ  ರೈಲ್ವೆ ಪ್ಲಾಟ್‌ಫಾರ್ಮ್ ಅಭಿವೃದ್ಧಿಗೆ ಗುದ್ದಲಿ ಪೂಜೆ, ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿದ್ದು, ಅನೇಕ ಹೊಸ ರೈಲು ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಶಿವಮೊಗ್ಗ ಸಮೀಪದ ಹಾರನಹಳ್ಳಿ ಗ್ರಾಮದ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ವಿಸ್ತರಣೆ ಅಭಿವೃದ್ಧಿಪಡಿಸುವ 1.88ಕೋಟಿ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಪ್ರಸ್ತುತ ಇರುವ ಪ್ಲಾಟ್ ಫಾರ್ಮ್ 250ಮೀ. ಅಗಲವಿದ್ದು, ಇದನ್ನು ಒಂದು ಮೀಟರ್ ಎತ್ತರಿಸುವ ಹಾಗೂ ಒಂದು ಮೀ. ಅಗಲ ವಿಸ್ತರಿಸಲು ಉದ್ದೇಶಿಸಲಾಗುವುದು. ಈ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ನಿಲ್ಲಿಸಿ, ಸಂಚರಿಸಲು ಅವಕಾಶ ದೊರೆಯಲಿದೆ ಎಂದವರು ನುಡಿದರು.

ಇದನ್ನೂ ಓದಿ > > ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ದೇಶದ ಪ್ರತಿಷ್ಟಿತ ನಗರಗಳಿಗೆ ಸಂಪರ್ಕ

ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕೋಟೆಗಂಗೂರು ರೈಲ್ವೆ ಡಿಪೋ ಅಧಿಕೃತವಾಗಿ ಆರಂಭಗೊಂಡ ನಂತರ ದೇಶದ ಪ್ರತಿಷ್ಟಿತ ನಗರಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ಹೊಸ ಮಾರ್ಗಗಳು ಆರಂಭಗೊಳ್ಳಲಿವೆ. ವಿಶೇಷವಾಗಿ ವಂದೇಭಾರತ್ ರೈಲು ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ ತಿರುಪತಿ, ಕೇರಳದ ಎರ್ನಾಕುಲಂ, ಬಿಹಾರ, ಜಾರ್ಖಂಡ್, ಚಂಡೀಘಡ, ಗುವಾಹಟಿಗೆ ರೈಲು ಸಂಪರ್ಕ ದೊರೆತು ರೈಲ್ವೇ ಜಂಕ್ಷನ್ ಆಗಿ ಪರಿವರ್ತನೆಯಾಗಲಿದೆ. ಇದರಿಂದಾಗಿ ಮಲೆನಾಡಿನ ಜನರು ದೇಶದಾದ್ಯಂತ ಸಂಚರಿಸಲು ಅನುಕೂಲವಾಗಲಿದೆ ಎಂದ ಅವರು, ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು ರೈಲು ಸಂಚಾರ ಆರಂಭಗೊಳ್ಳುವುದರೊಂದಿಗೆ ಮಹಾರಾಷ್ಟ್ರ ಸೇರಿದಂತೆ ಉತ್ತರಭಾರತದ ರಾಜ್ಯಗಳಿಗೆ ಸಂಚಾರ ಸಂಪರ್ಕ ದೊರೆಯಲಿದೆ ಎಂದರು.

2 ತಿಂಗಳಲ್ಲಿ ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಲೋಕಾರ್ಪಣೆ

ಮುಂದಿನ ಎರಡು ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿರುವ ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ರಾಜ್ಯದ ಮುಖ್ಯವಾದ ನಾಲ್ಕು ಡಿಪೋಗಳಲ್ಲಿ ಗುರುತಿಸುವ ಸ್ಥಾನಮಾನ ಹೊಂದಲಿದೆ. ಪ್ರಸ್ತುತ ವಾರಕ್ಕೆ ಮೂರು ಬಾರಿ ಮತ್ತು ವಾರಕ್ಕೆ ಒಂದು ಬಾರಿ ರೈಲಿನ ನಿರ್ವಹಣೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ನಡೆಯುತ್ತಿದ್ದು, ಅದು ಮುಂದಿನ ದಿನಗಳಲ್ಲಿ ಕೋಟೆಗಂಗೂರಿಗೆ ಸ್ಥಳಾಂತರಗೊಳ್ಳಲಿದೆ. ಅಲ್ಲದೇ ಶಿವಮೊಗ್ಗ ನಗರದಲ್ಲಿನ ಗೂಡ್ಸ್‌ಶೆಡ್ ಕೂಡ ಕೋಟೆಗಂಗೂರಿಗೆ ಸ್ಥಳಾಂತರಗೊಳ್ಳಲಿದೆ ಎಂದ ಅವರು, ತಾಳಗುಪ್ಪ, ಸಾಗರ ಮತ್ತು ಶಿವಮೊಗ್ಗದ ರೈಲ್ವೆ ನಿಲ್ದಾಣಗಳನ್ನು 100ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸುವ ಕಾರ್ಯ ಕೈಗೊಳ್ಳಲಾಗುವುದು. ದಶಕಗಳ ಹಿಂದೆ ಕೇವಲ ಕೆಲವೇ ರೈಲುಗಳು ಸಂಚರಿಸುತ್ತಿದ್ದ ರೈಲು ಕಂಬಿಗಳ ಮೇಲೆ ಇಂದು ಪ್ರತಿನಿತ್ಯ 28ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿವೆ ಎಂದರು.

ಇದನ್ನೂ ಓದಿ > > ಶಿವಮೊಗ್ಗ, ನ್ಯಾಷನಲ್ ಗೋಲ್ಡ್ & ಡೈಮಂಡ್ ನಲ್ಲಿ ಮೇಘಾ ಲಕ್ಕಿ ಡ್ರಾ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಡಾ|| ಧನಂಜಯ ಸರ್ಜಿ ಅವರು ಮಾತನಾಡಿ, ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಗಳಾಗಿವೆ. ನೂತನ ರೈಲ್ವೆ ಸಂಪರ್ಕ ವ್ಯವಸ್ಥೆ ದೊರೆತು ಜನಸಾಮಾನ್ಯರು ರಾಜ್ಯದಾದ್ಯಂತ ಸಂಚರಿಸಲು ಅನುಕೂಲವಾಗಿದೆ. ಈ ಎಲ್ಲಾ ಕಾಮಗಾರಿಗಳ ಹಿಂದಿನ ಪ್ರೇರಕ ಶಕ್ತಿಯಾಗಿರುವ ಸಂಸದ ಬಿ.ವೈ.ರಾಘವೇಂದ್ರ ಅವರು ನುಡಿದಂತೆ ನಡೆದು ಮಾದರಿ ಜನನಾಯಕರಾಗಿದ್ದಾರೆ. ಆದ್ದರಿಂದ ಅವರು ಅಭಿನಂದನಾರ್ಹರು ಎಂದರು.

ಇದನ್ನೂ ಓದಿ > > ಶಿವಮೊಗ್ಗ, ಅಡಕೆ ಬೇಯಿಸುವ ಹಂಡೆಗೆ ಬಿದ್ದ ಗಾಯಗೊಂಡಿದ್ದ ವ್ಯಕ್ತಿ ಸಾವು!

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ, ಕೆ.ಜಿ.ಕುಮಾರಸ್ವಾಮಿ, ಜಗದೀಶ್, ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.ಚಿ

Tags: BY RagavendrabyrGroundbreaking ceremony for the development of Haranahalli railway platform: What did MP Raghavendra say?Haranahalli railway platformshivamoga mp
Previous Post

ಶಿವಮೊಗ್ಗ, ಅಡಕೆ ಬೇಯಿಸುವ ಹಂಡೆಗೆ ಬಿದ್ದ ಗಾಯಗೊಂಡಿದ್ದ ವ್ಯಕ್ತಿ ಸಾವು!

Next Post

ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!

ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL