ಶಿವಮೊಗ್ಗ : ಶಿವಮೊಗ್ಗ (Shivamogga) ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ZP CEO) ಹೇಮಂತ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಿಷಿ ಆನಂದ್ ಅವರನ್ನು ನಿಯೋಜಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಹೇಮಂತ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ > > ಕೇರಳ, ಮಹಾರಾಷ್ಟ್ರ, ಗೋವಾ ಮುಂದಿದ್ದರೆ ಕರ್ನಾಟಕ ಯಾಕೆ ಹಿಂದೆ?, ಡಾ. ಧನಂಜಯ ಸರ್ಜಿ
ವಿಜಯಪುರ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದ ರಿಷಿ ಆನಂದ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ರಿಷಿ ಆನಂದ್ ಅವರು ಇನ್ನು ಮುಂದೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದ ಎನ್. ಹೇಮಂತ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಿಷಿ ಆನಂದ್ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ > > ಎರಡು ಬೈಕ್ಗಳ ಭಾರೀ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ಸಾವು
ಹೇಮಂತ್ ಅವರನ್ನು ಹುಬ್ಬಳ್ಳಿಯ `ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ’ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.














