ಸಾಗರ: ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ಕುರಿತು ಮಾಹಿತಿ ಪಡೆದರು.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ
ಆಸ್ಪತ್ರೆಯ ವ್ಯವಸ್ಥೆ ಹಾಗೂ ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿ, ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದ ಅವರು, ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡುವಂತೆ ನಿರ್ದೇಶಿಸಿದರು.
ಇದನ್ನೂ ಓದಿ > > ಶಿವಮೊಗ್ಗ, ಹೆಜ್ಜೇನು ದಾಳಿ, ಚಿಕಿತ್ಸೆ ಫಲಿಸದೆ ರೈತ ಸಾವು, ಆಗಿದ್ದೇನು?
ರೋಗಿಗಳು ಹಾಗೂ ಸಾರ್ವಜನಿಕರಿಂದ ಸಿಬ್ಬಂದಿ ವಿರುದ್ಧ ದೂರುಗಳು ಬಂದರೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.














