ಭದ್ರಾವತಿ: ಇಲ್ಲಿನ ಜೈಭೀಮ್ ನಗರದ ಪ್ರವೇಶದ್ವಾರದ ಬಳಿ ಇರುವ ರಮೇಶ್ ಎಂಬುವವರ ಜೆರಾಕ್ಸ್ ಅಂಗಡಿಯಲ್ಲಿ ಬುಧವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂದಾಜು 3ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಸಂಜೆ 7 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ
ನೋಡ ನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಒಂದು ಜೆರಾಕ್ಸ್ ಯಂತ್ರ ಹಾಗೂ ಪೀಠೋಪಕರಣಗಳು ಸುಟ್ಟು ಹೋಗಿವೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ > > ಶಿವಮೊಗ್ಗ, ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ತಿಲತರ್ಪಣ ಕಾರ್ಯಕ್ರಮ
ಈ ಸಂಬಂಧ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














