ಶಿವಮೊಗ್ಗ : ನಗರದ ಲಕ್ಷ್ಮಿ ಟಾಕೀಸ್ ಸರ್ಕಲ್ ಹಾಗೂ ವಿನೋಬಾನಗರ ಭಾಗದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಅತಿಕ್ರಮಣದ ವಿರುದ್ಧ ಟ್ರಾಫಿಕ್ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.
ಶಿವಮೊಗ್ಗದ ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ, ಫುಟ್‌ಪಾತ್ ಹಾಗೂ ರಸ್ತೆ ಆಕ್ರಮಿಸಿಕೊಂಡಿದ್ದ ತರಕಾರಿ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಅಂಗಡಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿದ್ದಾರೆ.
ಇದನ್ನೂ ಓದಿ > > ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?
ಸಾರ್ವಜನಿಕರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ಫುಟ್‌ಪಾತ್‌ಗಳನ್ನು ತೆರವುಗೊಳಿಸುವಂತೆ ಪೊಲೀಸರು ಹಾಗೂ ಸ್ಥಳೀಯ ಆಡಳಿತ ಹಲವು ಬಾರಿ ಸೂಚನೆ ನೀಡಿದ್ದರು. ಆದಾಗ್ಯೂ, ತರಕಾರಿ ವ್ಯಾಪಾರಿಗಳು ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಮತ್ತೆ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನೇ ಆಕ್ರಮಿಸಿಕೊಂಡು ವ್ಯಾಪಾರ ಮುಂದುವರಿಸಿದ್ದರು. ಇದರಿಂದಾಗಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ತೀವ್ರ ಕಿರಿಕಿರಿ ಅನುಭವಿಸುವಂತಾಗಿತ್ತು.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ
ಇಂದು ನಡೆದ ಕಟ್ಟುನಿಟ್ಟಿನ ಕಾರ್ಯಾಚರಣೆಯ ಪರಿಣಾಮವಾಗಿ ಶಿವಾಲಯದ ಸುತ್ತಮತ್ತಲಿನ ಪ್ರದೇಶ ಹಾಗೂ ವಿನೋಬಾನಗರದ ಮುಖ್ಯ ರಸ್ತೆಯಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಂಡಿದೆ. ಇದರಿಂದಾಗಿ ಪಾದಚಾರಿಗಳು ನಿರಾಳವಾಗಿ ಸಂಚರಿಸಲು ಹಾದಿ ಸುಗಮವಾಗಿದ್ದು, ಲಕ್ಷ್ಮಿ ಟಾಕೀಸ್ ಸರ್ಕಲ್ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ.
ಪೋಲಿಸರ ಈ ದಿಢೀರ್ ಕ್ರಮಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ > >ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!














