ಶಿಕಾರಿಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕ್ನಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಶಿಕಾರಿಪುರ ಪಟ್ಟಣದ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಿರೀಶ್ ಕುಮಾರ್ (36) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ತಾಲೂಕಿನ ಚಿಕ್ಕಾಪುರ ಗ್ರಾಮದ ಬಳಿ ಸುಮಾರು 15 ದಿನಗಳ ಹಿಂದೆ ಬೈಕ್ನಿಂದ ಆಯತಪ್ಪಿ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ತಾಲೂಕಿನ ಸಾಲೂರು ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಕುಮಾರ್ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಇದನ್ನೂ ಓದಿ > > ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?
ಗಿರೀಶ್ ಕುಮಾರ್ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.














