ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರಿಗೆ ಭೋವಿ ಸಮಾಜದ ಮುಖಂಡರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆಯಿತು.
ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದ ಉಗ್ರಪ್ಪ ಅವರನ್ನು ತಡೆದ ಪ್ರತಿಭಟನಾಕಾರರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಭೋವಿ ಮತ್ತು ವಡ್ಡರ ಸಮಾಜದ ಹೆಸರಿನಲ್ಲಿ ಗೊಂದಲ ಸೃಷ್ಟಿಸಬಾರದು ಎಂದು ಎಚ್ಚರಿಸಿದ ಕಾರ್ಯಕರ್ತರು, ಸಮಾಜದ ವಿಚಾರದಲ್ಲಿ ಮಾತನಾಡುವಾಗ ಸತ್ಯಾಸತ್ಯತೆ ಪರಿಶೀಲಿಸಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿಗಳ ನಿವಾಸದಲ್ಲಿ ಭೋವಿ ಸಮಾಜದ ಹೆಸರಿನಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿರುವ ವಿಚಾರಕ್ಕೂ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಒಳಮೀಸಲಾತಿ ವಿಚಾರದಲ್ಲಿ ಸಮಾಜದ ಹೆಸರನ್ನು ಬಳಸಿಕೊಂಡು ಗೊಂದಲ ಉಂಟುಮಾಡಬಾರದು. ತಮ್ಮ ಹೇಳಿಕೆಗಳ ಕುರಿತು ಉಗ್ರಪ್ಪ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ > > ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ಟೇಬಲ್ ಸಾವು!
ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಉಗ್ರಪ್ಪ ಅವರ ಕಾರು ಅಲ್ಲಿಂದ ತೆರಳಲು ವ್ಯವಸ್ಥೆ ಮಾಡಿದರು.
ಮಾಹಿತಿಯ ಕೊರತೆ, ರಾಜಕೀಯ ಪ್ರೇರಿತವಾಗಿ ಕಾರಿಗೆ ಮುತ್ತಿಗೆ: ವಿ.ಎಸ್. ಉಗ್ರಪ್ಪ
ಶಿವಮೊಗ್ಗ: ಭೋವಿ ಸಮಾಜದ ಮುಖಂಡರಿಗೆ ಲೆಜಿಸ್ಲೇಚರ್ ಸಮಿತಿಯ ವರದಿಯ ಕುರಿತು ಮಾಹಿತಿಯ ಕೊರತೆಯಿದ್ದು, ವಿಷಯವನ್ನು ಅಪಾರ್ಥ ಮಾಡಿಕೊಂಡು ರಾಜಕೀಯ ಪ್ರೇರಿತವಾಗಿ ತಮ್ಮ ಕಾರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೋವಿ ಸಮಾಜದವರು (bhovi) ಹಾಗೂ ವಡ್ಡ ಸಮಾಜದ ಭೋವಿಗಳಿಗೂ ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿ ನೀಡಬೇಕು ಎಂಬುದು ತಮ್ಮ ನಿಲುವಾಗಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಹಾಗೂ ಮೀಸಲಾತಿ ವಿಚಾರದಲ್ಲಿ ಯಾರಿಗೂ ತೊಂದರೆಯಾಗಬಾರದು ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ > >ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!
ಭೋವಿ ಸಮಾಜದಲ್ಲಿ ಪಲ್ಲಕ್ಕಿ ಹೊರುವವರೂ ಸೇರಿದಂತೆ ಅರ್ಹ ಸಮುದಾಯದವರಿಗೆ ಎಸ್ಸಿ ಮೀಸಲಾತಿ ಸೌಲಭ್ಯ ದೊರೆಯಬೇಕು. ತೆಲುಗು ವಡ್ಡರು, ಮಣ್ಣು ವಡ್ಡರು ಹಾಗೂ ಕಲ್ಲು ವಡ್ಡರಿಗೂ ಮೀಸಲಾತಿ ನೀಡುವಂತೆ ತಾವು ಹೇಳಿದ್ದಾಗಿ ತಿಳಿಸಿದರು.
ಈ ಸಂಬಂಧ ಲೆಜಿಸ್ಲೇಚರ್ ಸಮಿತಿಯ ಮಾಹಿತಿಯ ವರದಿ ತಮ್ಮ ಬಳಿ ಇದ್ದು, ಸಮಿತಿಯ ಅಧ್ಯಕ್ಷರಾಗಿ ತಾವು ವರದಿಯನ್ನು ಸಲ್ಲಿಸಿದ್ದೇನೆ ಎಂದು ಉಗ್ರಪ್ಪ ಸ್ಪಷ್ಟಪಡಿಸಿದರು.
ಇದನ್ನೂ ಓದಿ > > ನವೆಂಬರ್ 1ರಿಂದ ಎಲ್ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!
ವರದಿಯಲ್ಲಿನ ಅಂಶಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಅಪಾರ್ಥ ಮಾಡಿಕೊಂಡು ಕಾರಿಗೆ ಮುತ್ತಿಗೆ ಹಾಕಲಾಗಿದೆ. ಈ ಘಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸಿದರು.













