ತೀರ್ಥಹಳ್ಳಿ : ಸಕ್ರೆಬೈಲಿನ ಸಮೀಪ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಸಾವುಕಂಡಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದೆ ಗಂಭೀರ ಸ್ಥಿತಿಯಲ್ಲಿದ್ದ ಓರ್ವನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.













