ಶಿವಮೊಗ್ಗ : ನಗರದ ಬೈಪಾಸ್ ರಸ್ತೆಯ ಊರುಗಡೂರು ಬಳಿಯ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಶಹಬಾಜ್ ಎನ್ನುವವರಿಗೆ ಸೇರಿದ ಈ ಅಂಗಡಿಯಲ್ಲಿ ಇಂದು ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ತೀವ್ರತೆಯಿಂದಾಗಿ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಆರಿಸಿದೆ. ಅದೃಷ್ಟವಶಾತ್ ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಹರಡದಂತೆ ಸೂಕ್ತಕ್ರಮ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ನಷ್ಟದ ಒಟ್ಟು ಮೊತ್ತ ತಿಳಿದು ಬಂದಿಲ್ಲ. ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.













