• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

18 ಪಾಸ್‌ಬುಕ್, 25 ಎಟಿಎಂ ಕಾರ್ಡ್, 7 ಚೆಕ್ ಬುಕ್ ವಶಕ್ಕೆ, 55 ಕೋಟಿ ವಂಚನೆ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಕ್ರೈಂ ನ್ಯೂಸ್
18 ಪಾಸ್‌ಬುಕ್, 25 ಎಟಿಎಂ ಕಾರ್ಡ್, 7 ಚೆಕ್ ಬುಕ್ ವಶಕ್ಕೆ, 55 ಕೋಟಿ ವಂಚನೆ, ಏನಿದು ಪ್ರಕರಣ?
Share on FacebookShare on TwitterShare on WhatsApp

ಶಿವಮೊಗ್ಗ: ಕಮಿಷನ್ ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಯ ವಿವರ ಪಡೆದು ಅದನ್ನು ಸೈಬರ್ ವಂಚಕರಿಗೆ ಕೊಡುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗದ ತುಂಗಾ ನಗರ ನಿವಾಸಿ, ಕಾರು ಚಾಲಕ ಕೆ.ಶರತ್ ಕುಮಾರ್ ಅಲಿಯಾಸ್ ಗುಂಡಾ ಎಂಬಾತನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗದ ಸಿ.ಇ.ಎನ್ ಠಾಣೆ ಡಿವೈಎಸ್‌ಪಿ ಕೃಷ್ಣಮೂರ್ತಿ, ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶರತ್ ಕುಮಾರ್‌ನನ್ನು ಬಂಧಿಸಲಾಗಿದೆ. ಆತನಿಂದ ವಿವಿಧ ಬ್ಯಾಂಕ್ ಖಾತೆಗಳ 18 ಪಾಸ್‌ಬುಕ್‌ಗಳು, 25 ಎಟಿಎಂ ಕಾರ್ಡ್, 7 ಚೆಕ್ ಬುಕ್‌ಗಳು, 2 ಮೊಬೈಲ್ ಫೋನ್‌ಗಳು, 2 ಕ್ಯೂ.ಆರ್ ಕೋಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈತನ ಬಳಿ ಇದ್ದ 19 ಬಾಡಿಗೆ ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 96ಕ್ಕೂ ಹೆಚ್ಚು ವಂಚನೆ ಪ್ರಕರಣ ದಾಖಲಾಗಿವೆ.
ಟೀ ಅಂಗಡಿ ನಡೆಸುತ್ತಿದ್ದ ಆತನ ಸ್ನೇಹಿತ ಅಮಿತ್ ಎಂಬುವವರ ಬ್ಯಾಂಕ್ ಖಾತೆಯ ವಿವರ ಪಡೆದಿದ್ದ ಶರತ್‌ಕುಮಾರ್, ಅವರಿಂದ ಪಾಸ್ ಬುಕ್, ಎಟಿಎಂ ಕಾರ್ಡ್ ಮೊಬೈಲ್ ನಂಬರ್‌ಗಳನ್ನು ಕೂಡ ಪಡೆದುಕೊಂಡಿದ್ದ. ಆ ಖಾತೆಗೆ ಹಣದ ವಹಿವಾಟು ಆಧರಿಸಿ 15 ದಿನಕ್ಕೊಮ್ಮೆ ಕಮಿಷನ್ ಕೊಡುವುದಾಗಿ ನಂಬಿಸಿದ್ದ. ಕಮಿಷನ್ ಆಸೆಗೆ ಅಮಿತ್ ಎಲ್ಲ ವಿವರ ಒದಗಿಸಿದ್ದರು.
ಸ್ವಲ್ಪ ಸಮಯದ ಬಳಿಕ ಶರತ್ ಕುಮಾರ್, ಸ್ನೇಹಿತ ಅಮಿತ್‌ನ ಬ್ಯಾಂಕ್ ಖಾತೆ ಫ್ರೀಜ್ ಆಗಿದೆ ಎಂದು ತಿಳಿಸಿದ್ದ. ಅನುಮಾನಗೊಂಡ ಅಮಿತ್ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ ಹೋಗಿ ತಮ್ಮ ಖಾತೆಯ ಬಗ್ಗೆ ವಿಚಾರಿಸಿದ್ದರು. ಈ ಬ್ಯಾಂಕ್ ಖಾತೆಯ ವಿರುದ್ಧ ದೇಶದ ವಿವಿಧೆಡೆ 51 ಸೈಬರ್ ಅಪರಾಧ ಪ್ರಕರಣ ದಾಖಲಾಗಿವೆ ಎಂದು ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದರು. ಆತಂಕಗೊಂಡ ಅಮಿತ್ ಪೊಲೀಸರಿಗೆ ದೂರು ನೀಡಿದ್ದರು.
ಈ ಖಾತೆಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಸುಮಾರು 55,43,56,248 ಮೊತ್ತದ ವಂಚನೆ ಮಾಡಲಾಗಿದೆ. ಅಲ್ಲದೆ ಈ 19 ಖಾತೆಗಳಿಂದ 11,48,42,898 ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.

Tags: CEN POLICECRIMEcrime newskannada newskannada news livemalnad newsshimogashivamogga
Previous Post

ಎನ್ಇಎಸ್ |  ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ‍್ಯಾಂಕ್, ನಾಲ್ಕು ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ

Next Post

ಶಿವಮೊಗ್ಗ ಏರ್ ಕ್ವಾಲಿಟಿ ದಿಢೀರ್ ಕುಸಿತ, ತಜ್ಞರ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಏರ್ ಕ್ವಾಲಿಟಿ ದಿಢೀರ್ ಕುಸಿತ, ತಜ್ಞರ ಎಚ್ಚರಿಕೆ ಏನು?

ಶಿವಮೊಗ್ಗ ಏರ್ ಕ್ವಾಲಿಟಿ ದಿಢೀರ್ ಕುಸಿತ, ತಜ್ಞರ ಎಚ್ಚರಿಕೆ ಏನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL