ಶಿವಮೊಗ್ಗ: ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.09 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್ ನ್ನು ಬಿಡುಗಡೆ ಮಾಡಲಾಗಿದೆ.
ಮಹಿಳಾ ಉದ್ಯಮಿಗಳ ನೊಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರು, ಎನ್.ಆರ್ ಎಲ್.ಎಂ ಫಲಾನುಭವಿಗಳು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೆಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯಾ) ಘಟಕಗಳ ಮಹಿಳಾ ಉದ್ಯಮಿಗಳು, ರುಡ್ ಸೆಟ್-ಆರ್. ಎಸ್, ಇಟಿಐ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ದೂ.ಸಂ.: 08182-295514 ಕ್ಕೆ ಸಂಪರ್ಕಿಸಬಹುದಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













