ಶಿವಮೊಗ್ಗ: ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













