ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 28 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ 10 ವರ್ಷ ಕಠಿಣ ಶಿಕ್ಷೆ ಹಾಗೂ 1.30 ಲಕ್ಷ ದಂಡ ವಿಧಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಆಗಿನ ತೀರ್ಥಹಳ್ಳಿ ಇನ್ ಸ್ಪೆಕ್ಟರ್ ಜೆ.ಅಶ್ವತ್ಥಗೌಡ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದ ವತಿಯಿಂದ 4 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.













