ಸಾಗರ: ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ತಾಲೂಕಿನ ಆನಂದಪುರ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ನಡೆದಿದೆ.
ಬಸ್ ನಿಲ್ದಾಣದ ಎದುರು ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರೊಂದು ವೇಗವಾಗಿ ಬಂದಿದ್ದು, ಆಕೆಗೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ತಕ್ಷಣ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ > ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್ ಬಿದ್ದು ಸಾವು!
ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಡಿಕ್ಕಿ ಹೊಡೆದು ಪರಾರಿಯಾದ ಕಾರು ಮತ್ತು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ, ಕಾರಣವೇನು?















