ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಅರಸಾಳು ಕೆರೆ ಏರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೋಕ್ ತುಂಬಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಇದನ್ನೂ ಓದಿ > > ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?
ಮಂಗಳೂರಿನಿಂದ ಬಳ್ಳಾರಿಗೆ ಕೋಕ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎದುರಿನಿಂದ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ವೇಳೆ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ ಎನ್ನಲಾಗಿದೆ.
ಇದನ್ನೂ ಓದಿ > > ಆಟೋ ಚಾಲಕರ ಪ್ರತಿಭಟನೆ, ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್!, ದೇವರಾಜ್ ಖಡಕ್ ವಾರ್ನಿಂಗ್
ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿ ಕಂದಕಕ್ಕೆ ಉರುಳುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಲಾರಿ ಚಾಲಕನನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ.
ಇದನ್ನೂ ಓದಿ > > ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?
ಮಾಹಿತಿ ತಿಳಿದು ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.














