ರಿಪ್ಪನ್ಪೇಟೆ: ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭ ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ > > ಭದ್ರಾವತಿಯ ಯುವಕನಿಗೆ 3 ವರ್ಷ ಕಠಿಣ ಜೈಲು!, ಏನಿದು ಪ್ರಕರಣ?
ಗಾಯಗೊಂಡ ವಿದ್ಯಾರ್ಥಿನಿಯನ್ನು ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನಿಖಿತಾ ಎಂದು ಗುರುತಿಸಲಾಗಿದೆ. ನಿಖಿತಾ ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದು ತರಗತಿ ಮುಗಿಸಿ ಇಬ್ಬರು ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಘಟನೆಯ ಪರಿಣಾಮ ನಿಖಿತಾ ಅವರ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಕಾಲು ಸಂಪೂರ್ಣವಾಗಿ ಮುರಿದಿರುವುದಾಗಿ ತಿಳಿದುಬಂದಿದೆ. ತೀವ್ರ ನೋವಿನಿಂದ ವಿದ್ಯಾರ್ಥಿನಿ ಕೂಗಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಣೆ ನೀಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು.
ಇದನ್ನೂ ಓದಿ > > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯದ ತೀವ್ರತೆಯನ್ನು ಪರಿಗಣಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅಗತ್ಯವಿರುವುದರಿಂದ ಮಣಿಪಾಲ್ ಆಸ್ಪತ್ರೆಗೆ ರವಾನಿಸಲು ಸೂಚಿಸಿದರು. ಅದರಂತೆ ವಿದ್ಯಾರ್ಥಿನಿಯನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ > > ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?














