ಶಿವಮೊಗ್ಗ: ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಯುವಕನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ತಾಲೂಕಿನ ಕೊನಗವಳ್ಳಿ ಗ್ರಾಮದ ನಿವಾಸಿ ಪ್ರಶಾಂತ್ (28) ಮೃತ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂದಿನಂತೆ ಮಾರ್ಚ್ 12 ರಂದು ಶಿವಮೊಗ್ಗದಲ್ಲಿ ಕೆಲಸ ಮುಗಿಸಿ ರಾತ್ರಿ 8.30ರ ಸುಮಾರಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಊರಿಗೆ ಹಿಂದಿರುಗುತ್ತಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಗೆ ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ
ಗೇಜ್ಜೆನಹಳ್ಳಿ ಗ್ರಾಮದ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಬರುತ್ತಿದ್ದಂತೆ, ವಾಹನವೊಂದು ಪ್ರಶಾಂತ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತವೆಸಗಿದ ವಾಹನ ಸ್ಥಳದಿಂದ ಪರಾರಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿ, ಪೊಲೀಸ್ ಗೌರವದೊಂದಿಗೆ ಆರ್‌ಎಸ್‌ಐ ಅಂತ್ಯಕ್ರಿಯೆ
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್ ಅವರನ್ನು ಸ್ಥಳೀಯರು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಾರ್ಚ್ 14ರಂದು ಪ್ರಶಾಂತ್ ಮರಣ ಹೊಂದಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














