• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 30, 2026
in ಶಿವಮೊಗ್ಗ
ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಆಹಾರ ಉದ್ಯಮಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಲೋಪದೋಷಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಶೀಲ್ದಾರ್ ರಾಜೀವ್ ಅವರ ನೇತೃತ್ವದ ತಂಡ ನಗರದ ವಿವಿಧ ಹೋಟೆಲ್‌ಗಳು, ಹಾಸ್ಟೇಲ್ ಹಾಗೂ ಆಹಾರ ತಯಾರಿಕಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿಶೇಷ ಆಹಾರ ಸುರಕ್ಷತಾ ತಪಾಸಣಾ ಅಭಿಯಾನದ ಅಂಗವಾಗಿ ನಡೆದ ಈ ಪರಿಶೀಲನೆಯಲ್ಲಿ, ಸಾರ್ವಜನಿಕರ ಸೇವನೆಗೆ ಯೋಗ್ಯವಾದ ಆಹಾರ ಪದಾರ್ಥಗಳನ್ನು ತಯಾರಿಸಿ, ಸಂಗ್ರಹಿಸಿ ಹಾಗೂ ಮಾರಾಟ ಮಾಡುತ್ತಿರುವ ಸ್ಥಳಗಳಲ್ಲಿನ ವ್ಯವಸ್ಥೆಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೋಟೆಲ್ ಉದ್ಯಮಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಿದರು.

ಇದನ್ನೂ ಓದಿ > > ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!

ಅವಧಿ ಮೀರಿದ ಹಾಗೂ ಬಳಕೆಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ತಕ್ಷಣ ಪ್ರತ್ಯೇಕಿಸಿ, ಅವುಗಳನ್ನು ಯಾವುದೇ ರೀತಿಯಲ್ಲೂ ತಯಾರಿಕೆ ಅಥವಾ ಮಾರಾಟದಲ್ಲಿ ಬಳಸದಂತೆ ಸೂಕ್ತವಾಗಿ ವಿಲೇವಾರಿ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಡಾ. ಮೈತ್ರಿ ಸೂಚಿಸಿದರು.

ಆಹಾರ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸ್ವಚ್ಛ ಹಾಗೂ ಆಹಾರ ಸುರಕ್ಷಿತ ಕಂಟೇನರ್‌ಗಳಲ್ಲಿ ಸಂಗ್ರಹಿಸಬೇಕು. ಅಡುಗೆಮನೆ, ಆಹಾರ ತಯಾರಿಕಾ ಸ್ಥಳ ಹಾಗೂ ಸಂಗ್ರಹಣಾ ಪ್ರದೇಶಗಳನ್ನು ಸ್ವಚ್ಛ ಮತ್ತು ಶುಷ್ಕ ವಾತಾವರಣದಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.

ಹಾಲು, ಮಾಂಸ, ಮೊಟ್ಟೆ ಹಾಗೂ ಸಿದ್ಧ ಆಹಾರಗಳನ್ನು ನಿಗದಿತ ತಾಪಮಾನದಲ್ಲಿ ಸಂಗ್ರಹಿಸುವುದರ ಜೊತೆಗೆ ರೆಫ್ರಿಜರೇಟರ್, ಕೂಲರ್ ಸೇರಿದಂತೆ ತಾಪಮಾನ ನಿಯಂತ್ರಣ ಸಾಧನಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು. ಆಹಾರ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆಯೂ ಸೂಕ್ತ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ > > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ!

ಆಹಾರ ನಿರ್ವಹಿಸುವ ಸಿಬ್ಬಂದಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ಸುರಕ್ಷಿತ ಆಹಾರ ನಿರ್ವಹಣಾ ವಿಧಾನಗಳ ಕುರಿತು ಅಗತ್ಯ ತರಬೇತಿಯನ್ನೂ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದರು.

ಹತ್ತು ದಿನಗಳ ಗಡುವು

ತಪಾಸಣೆಯ ವೇಳೆ ಕಂಡುಬಂದಿರುವ ಲೋಪದೋಷಗಳನ್ನು ಹತ್ತು ದಿನಗಳೊಳಗೆ ಸರಿಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಆಹಾರ ಸುರಕ್ಷತಾ ಮಾನದಂಡಗಳ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಹೋಟೆಲ್ ಉದ್ಯಮಿಗಳಿಗೆ ಎಚ್ಚರಿಕೆ ನೀಡಿದರು.

ತಪಾಸಣಾ ತಂಡವು ಹೋಟೆಲ್ ಹರ್ಷ ಫರ್ನ್, ನಿರಾಶ್ರಿತರ ಪರಿಹಾರ ಕೇಂದ್ರ ತಾವರೆಕೊಪ್ಪ, ವಿನೋಬನಗರದ ಸವಿ ಬೇಕರಿ ಹಾಗೂ ಗಾಂಧಿನಗರದ ವಿಧಾತ್ರಿ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಇದನ್ನೂ ಓದಿ > > 2028ರ ಚುನಾವಣೆಗೆ ಈಶ್ವರಪ್ಪ ಕುಟುಂಬ ಸಜ್ಜು; ಶಿವಮೊಗ್ಗ ನಗರದಿಂದ ಸ್ಪರ್ಧೆ ಶೇ.100 ಖಚಿತ!

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರೊಂದಿಗೆ ತಾಲೂಕು ದಂಡಾಧಿಕಾರಿ ವಿ.ಎಸ್. ರಾಜೀವ್, ತಾಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಸಿಬ್ಬಂದಿ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ!

Next Post

ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ರಿಪೇರಿ ಆಗುತ್ತೆ, ರಾಜಕಾರಣಿಗಳು ಸನ್ಯಾಸಿಗಳಲ್ಲ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL