ಭದ್ರಾವತಿ: ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಭದ್ರಾವತಿ (Bhadravathi) ನ್ಯೂ ಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯದ (Court) ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ದಾವಣಗೆರೆ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?
2010ರ ಕಳ್ಳತನ ಪ್ರಕರಣ
ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ 2010ನೇ ಸಾಲಿನಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 379ರ ಅಡಿಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಅವರು ನ್ಯಾಯಾಲಯದ ಮುಂದೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಭದ್ರಾವತಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ACJM) ಮತ್ತು ಜೆಎಂಎಫ್ಸಿ ನ್ಯಾಯಾಲಯವು ಪ್ರಕರಣದ ಸಿ.ಸಿ. ನಂ.1790/2010ರಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!
ಪೊಲೀಸ್ ತಂಡದಿಂದ ಕಾರ್ಯಾಚರಣೆ
ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಗೊಳಿಸುವ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿ ತಂಡವು ಕಾರ್ಯಾಚರಣೆ ನಡೆಸಿ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಬಳಿಕ ಭದ್ರಾವತಿಯ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ > > ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್ ಬೆಂಕಿಗಾಹುತಿ!
13 ವರ್ಷಗಳ ಕಾಲ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ














