ಶಿವಮೊಗ್ಗ: ತಾಲೂಕಿನ ಹೊಳಲೂರು ಗ್ರಾಮದಲ್ಲಿ ಗೋಡೌನ್‌ನಿಂದ 4 ಕ್ವಿಂಟಾಲ್ 80 ಕೆಜಿ ಒಣ ಅಡಿಕೆ ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗದ ರಾಹುಲ್ (25), ಜಗನ್ನಾಥ ಎಸ್. (23), ಚಂದನ್ ಕೆ. (22), ನವೀನ್ (20) ಹಾಗೂ ಸುದೀಪ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ
ಬಂಧತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ಹಾಗೂ ಕಳುವಾಗಿದ್ದ ಒಣ ಅಡಿಕೆಯನ್ನು ಸೇರಿ ಒಟ್ಟು 5.75 ಲಕ್ಷ ರೂ. ಮೌಲ್ಯದ ಸೊತ್ತು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ > > ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್
ಘಟನೆಯ ವಿವರ
ಆಗಸ್ಟ್ 23ರ ಬೆಳಗಿನ ಜಾವ ಹೊಳಲೂರು ಗ್ರಾಮದ ಗೋಡೌನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಒಣ ಅಡಿಕೆಯನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ ಹಾಗೂ ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ
ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ ಮಾರುತಿ ಸುಜುಕಿ ಇಕೋ ಕಾರು, 25ಸಾವಿರ ರೂ. ಮೌಲ್ಯದ ಹೀರೋ ಹೆಚ್‌ಎಫ್ ಡೀಲಕ್ಸ್ ಬೈಕ್ ಹಾಗೂ 2.50 ಲಕ್ಷ ರೂ. ಮೌಲ್ಯದ 8 ಕ್ವಿಂಟಾಲ್ 60 ಕೆಜಿ ಒಣ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಸೊತ್ತಿನ ಒಟ್ಟು ಮೌಲ್ಯ ಸುಮಾರು 5.75 ಲಕ್ಷ ರೂ. ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.














