ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯಲ್ಲಿ ಎಟಿಎಂ ಹಣ ಸಾಗಣೆ ಮಾಡುವ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದಲ್ಲಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿರುವುದನ್ನು ಗಮನಿಸಿದ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ 112 ಪೊಲೀಸರು ವಾಹನವನ್ನು ಪರಿಶೀಲಿಸಿದ್ದು, ಅದರಲ್ಲಿ ಹಣವಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಹಾಗೂ ಚಾಲಕ ಏಕೆ ಸ್ಥಳದಿಂದ ಪರಾರಿಯಾದ ಎಂಬ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ > ಎಸ್.ಆರ್.ಎನ್.ಎಂ ಕಾಲೇಜಿನ ಓರಿಯಂಟೇಷನ್ ಕಾರ್ಯಕ್ರಮ, ಖ್ಯಾತ ಉದ್ಯಮಿ ನಿವೇದನ್ ನೆಂಪೆ ನೀಡಿದ ಸಲಹೆಗಳೇನು?
ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.















