ಸಾಗರ : ತಾಲ್ಲೂಕಿನ ತಾಳಗುಪ್ಪದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಸಾರ್ವಜನಿಕರೆ ಹಿಡಿದು ಧರ್ಮದೇಟು ಕೊಟ್ಟು, ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಇದನ್ನೂ ಓದಿ > ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್
ತಾಳಗುಪ್ಪದ ಮಸೀದಿ ಏರಿಯಾದಲ್ಲಿ ಭಟ್ಕಳ ಮೂಲದ ಇಬ್ಬರು ಸೋಮವಾರ ತಡರಾತ್ರಿ ಮನೆಗಳ ಮೇಲೆ ಟಾರ್ಚ್ ಬಿಟ್ಟು ಇಣುಕಿ ನೋಡುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ಒಟ್ಟಾಗಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > ಹೃದಯಾಘಾತದಿಂದ ಯುವತಿ ಸಾವು!, ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
ಇಬ್ಬರನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ಕೊಟ್ಟಾಗ ಒಬ್ಬರ ಮೇಲೆ ಒಬ್ಬರು ಆರೋಪ ಹೊರಿಸಿ ಕೊಂಡಿದ್ದಾರೆ. ರಾತ್ರಿಯ ವೇಳೆ ಕಳ್ಳತನ ಮಾತ್ರವಲ್ಲದೇ ಹೆಣ್ಣುಮಕ್ಕಳ ಚಿತ್ರಗಳನ್ನು ಸೆರೆ ಹಿಡಿಯುತ್ತಿರುವುದಾಗಿ ಒಪ್ಪಿಕೊಳ್ಳುವ ಜೊತೆಗೆ ಬೇರೆಬೇರೆ ಭಾಗಗಳಲ್ಲಿ ಕಳ್ಳತನ ಮಾಡಿದ್ದನ್ನು ಒಪ್ಪಿಕೊಂಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸ್ಥಳಕ್ಕೆ ಬಂದ ತಾಳಗುಪ್ಪ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಇವರ ಮೇಲೆ ದಕ್ಷಿಣ ಕನ್ನಡ, ಉಡುಪಿ, ಕುಂದಾಪುರ ಸೇರಿ ಬೇರೆಬೇರೆ ಠಾಣೆಗಳಲ್ಲಿ ಪ್ರಕರಣ ಇರುವುದು ಬೆಳಕಿಗೆ ಬಂದಿದೆ.















