ಭದ್ರಾವತಿ: ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪದ ಮೇಲೆ ಸುಣ್ಣದಹಳ್ಳಿ ಗ್ರಾಮದ ನಾಲ್ವರು ಆರೋಪಿಗಳಿಗೆ ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್ ಎರಡು ವರ್ಷ ಜೈಲು ಶಿಕ್ಷೆ ಹಾಗೂ 1,90,000/- ದಂಡ ವಿಧಿಸಿದ್ದಾರೆ.
ಸುಣ್ಣದಹಳ್ಳಿ ಗ್ರಾಮದ ನಿವಾಸಿಗಳಾದ ಜಗದೀಶ್, ಕಾಂತರಾಜು, ನಾಗೇಶ, ಮಂಜುನಾಥ್ ಹಾಗೂ ಪ್ರೇಮ ಶಿಕ್ಷೆಗೊಳಗಾದವರು.
ಇದನ್ನೂ ಓದಿ ಏಪ್ರಿಲ್ 3 ರಂದು ಫ್ರೀಡಂ ಪಾರ್ಕ್ ನಲ್ಲಿ ಶ್ರೀನಿವಾಸ ಕಲ್ಯಾಣ’ ಮಹೋತ್ಸವ
ಘಟನೆ ವಿವರ: ಸುಣ್ಣದಹಳ್ಳಿ ಗ್ರಾಮದಲ್ಲಿ ವಿ. ಆರ್ಮುಗಂ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸರ್ವೇ ಕಾರ್ಯ ನಡೆಯುವಾಗ ಆರೋಪಿಗಳು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆರ್ಮುಗಂ ಅವರನ್ನು ಜಾತಿಯ ಹೆಸರಿನಲ್ಲಿ ನಿಂದಿಸಿ ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು.
ಇದನ್ನೂ ಓದಿ ಸಾಗರ, ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ, ಬಿಜೆಪಿ ಪ್ರತಿಭಟನೆ
ಘಟನೆಗೆ ಸಂಬಂಧ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.














