ಶಿವಮೊಗ್ಗ: ತಾಲೂಕಿನ ಆಯನೂರು ಸಮೀಪದ ಬೈರನಕೊಪ್ಪ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > > ಶಿವಮೊಗ್ಗ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ
ಮೃತರನ್ನು ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ವಿರೇಶ್ (28) ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಬೆಳಗಿನ ಜಾವ ವಿರೇಶ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿರೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ > > ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.














