ಶಿವಮೊಗ್ಗ: ಬಿಜೆಪಿಯ ವಿಜಯ ಯಾತ್ರೆ ಇಂದಿನಿಂದಲೇ ಪ್ರಾರಂಭವಾಗಿದೆ. ಇನ್ನು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್ ಹೇಳಿದರು.
ಅವರು ಇಂದು ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಹಮ್ಮಿಕೊಂಡಿದ್ದ ವಿಧಾನ ಪರಿಷತ್ 4 ಸ್ಥಾನಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ಇದನ್ನೂ ಓದಿ > > ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?
ಮುಂಬರುವ ಜಿಲ್ಲಾ ಪಂಚಾಯತ್. ತಾಪಂ. ಪಾಲಿಕೆ ಹಾಗೂ 2028ರ ವಿಧಾನಸಭಾ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಜಯ ಸಾಧಿಸಲಿದ್ದು ಕಾಂಗ್ರೆಸ್ನ ಭ್ರಷ್ಟಾಚಾರಕ್ಕೆ ಸಂಕಷ್ಟಕ್ಕೀಡಾದ ರಾಜ್ಯದ ಜನ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಸಿಂಗಲ್ ಡಿಜಿಟ್ಟಿಗೆ ತರಲಿದ್ದಾರೆ ಎಂದು ಭವಿಷ್ಯ ನುಡಿದರು.
4 ಟೆಸ್ಟ್ಗಳಲ್ಲಿ ಪಾಸಾಗಿದ್ದೇವೆ. ಮುಂಬರುವ ಪರೀಕ್ಷೆಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇವಿಎಂ ವಿರೋಧಿಸುತ್ತಿದ್ದ, ಮತ ಪತ್ರ ಚುನಾವಣೆಗೆ ಒತ್ತಾಯಿಸಿದ ಕಾಂಗ್ರೆಸ್ಗೆ ಜನರು ಪಾಠ ಕಲಿಸಿದ್ದಾರೆ. ಪ್ರಜ್ಞಾವಂತ ಶಿಕ್ಷಕರು ಮತ್ತು ಪದವೀಧರರು ತಕ್ಕ ಉತ್ತರ ನೀಡಿದ್ದಾರೆ ನಾಲ್ಕಕ್ಕೆ ನಾಲ್ಕೂ ಸ್ಥಾನಗಳಲ್ಲಿ ಎನ್ಡಿ ಎ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದೇ ಮೊದಲ ಬಾರಿಗೆ ನಾಲ್ಕು ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಲೀಡ್ ಪಡೆದು ಜಯಗಳಿಸಿದ್ದು ವಿಶೇಷವಾಗಿದೆ ಎಂದರು.
ಇದನ್ನೂ ಓದಿ > >ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್ ವಶಕ್ಕೆ, ನವೆಂಬರ್ 15ಕ್ಕೆ ಡೆಡ್ಲೈನ್!
ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ನಗರ ಗ್ರಾಮಾಂತರ ಮತ್ತು ಜಿಲ್ಲಾಮಟ್ಟದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎನ್ ಕೆ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಜ್ಯೋತಿ ಪ್ರಕಾಶ್, ಬಳ್ಳಕೆರೆ ಸಂತೋಷ್, ಮಾಲತೇಶ್, ಸುರೇಖಾ ಮುರಳಿಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಧುರಾ ಶಿವಾನಂದ್, ಸಿದ್ದಲಿಂಗಪ್ಪ, ಸುರೇಶ್, ರಶ್ಮಿ ಶ್ರೀನಿವಾಸ್, ಎಚ್.ಎನ್.ಮಂಜುನಾಥ್, ಯಶೋಧಾ ವೈಷ್ಣವ, ವಿಶ್ವನಾಥ್, ಚಂದ್ರಶೇಖರ್ ಮತ್ತಿತರರು ಇದ್ದರು














