• About Us
  • Advertise
  • Privacy & Policy
  • Contact Us
Wednesday, July 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 29, 2026
in ಶಿವಮೊಗ್ಗ
ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!
Share on FacebookShare on TwitterShare on WhatsApp

ಶಿವಮೊಗ್ಗ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ಮಂಡ್ಯದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಭಾರೀ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರತಿಭಟನೆಯನ್ನು ತಮ್ಮ ನೇತೃತ್ವದಲ್ಲಿ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಅವರ ಸಹಭಾಗಿತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು. ರೈತ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಈ ಹೋರಾಟದಲ್ಲಿ ಭಾಗವಹಿಸಿ, ಸಂಕಷ್ಟದಲ್ಲಿರುವ ರೈತರ ಪರವಾಗಿ ಧ್ವನಿಯಾಗಬೇಕೆಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಟೀಕೆ

ಕಾವೇರಿ ನೀರಿನ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಸಿಡಬ್ಲ್ಯುಆರ್‌ಸಿ (Cauvery Water Regulation Committee) ಮುಂದೆ ವಾದ ಮಂಡಿಸಲು ನಿಯೋಜಿತ ವಕೀಲರು ಮತ್ತು ಅಧಿಕಾರಿಗಳು ರಾಜ್ಯದ ನೀರಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

ಕರ್ನಾಟಕದ ರೈತರು ಈಗಾಗಲೇ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ. ವಿಶೇಷವಾಗಿ ಕಾವೇರಿ ಕಣಿವೆಯ ರೈತರು ಬೆಳೆ ಬಿತ್ತನೆಗೂ ಅಸಮರ್ಥರಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಸಿಡಬ್ಲ್ಯುಆರ್‌ಸಿ ಸೂಚನೆಗೂ ಮುನ್ನವೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ > > ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

“ವಾಸ್ತವಾಂಶವನ್ನು ತಿಳಿಸಬೇಕಿತ್ತಲ್ಲವೇ?”

ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸಿಡಬ್ಲ್ಯುಆರ್‌ಸಿಗೆ ಸರಿಯಾಗಿ ತಿಳಿಸಬೇಕಾಗಿತ್ತು. ಆದರೆ ಅದನ್ನು ಮಾಡಲು ಸರ್ಕಾರ ವಿಫಲವಾಗಿದೆ ಎಂದು ಅವರು ಪ್ರಶ್ನಿಸಿದರು. ಕಾವೇರಿ ಕಣಿವೆಯ ಜನರು ಕುಡಿಯುವ ನೀರಿಗೂ ತೊಂದರೆ ಅನುಭವಿಸುತ್ತಿರುವ ಸಂದರ್ಭದಲ್ಲಿ, ರೈತರು ಬಿತ್ತನೆ ಮಾಡಬಾರದು ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತರಿಗೆ ಮೋಸ ಮಾಡಿದ್ದು, ಯುಪಿಎ ಮೈತ್ರಿ ಪಾಲುದಾರರಾದ ತಮಿಳುನಾಡು ಮುಖ್ಯಮಂತ್ರಿಯನ್ನು ಸಂತೋಷಪಡಿಸಲು ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು.

“ಮೊದಲು ಕರ್ನಾಟಕಕ್ಕೆ ನೀರು, ಬಳಿಕ ತಮಿಳುನಾಡು”

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿ ನೀರಿನ ಲಭ್ಯತೆ ಸಮರ್ಪಕವಾಗಿದ್ದರೆ ಮಾತ್ರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಇದನ್ನೂ ಓದಿ > > ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!

ಕಾಂಗ್ರೆಸ್ ಭವಿಷ್ಯ ಕುರಿತು ಭವಿಷ್ಯವಾಣಿ

ಇದೇ ವೇಳೆ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ

ಬಾಂಗ್ಲಾ ಅಕ್ರಮ ನುಸುಳುಕೋರರನ್ನು ತಡೆಯುವ ಸಲುವಾಗಿ ದನಿ ಎತ್ತಿದರೆ ಅಂತಹ ವೈದ್ಯರನ್ನೇ ದಮನಿಸುವ ಕೆಲಸ ಮಾಡಿದ್ದಾರೆ. ವೈದ್ಯರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಇದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಸ್ಪಷ್ಟವಾಗುತ್ತಿದೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದೆ ಎಂದರು.

Tags: BJP protests in Mandyaby vijayendracriticises BY Vijayendrakannada newskannada news livelatest newsmalnad newsshimogashivamoggastate governmentಶಿವಮೊಗ್ಗ
Previous Post

ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!

Next Post

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

July 29, 2026
ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

July 29, 2026
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!

July 29, 2026
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

July 29, 2026
ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

July 29, 2026

Copyright © 2026 Yuva Dhwani. Designed by KIPL