ಶಿವಮೊಗ್ಗ : ಮಳೆಯ ಅಬ್ಬರದ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಘಟನೆಗೆ ದುಃಖದ ಅಂತ್ಯ ಸಿಕ್ಕಿದೆ.
ಸುಮಾರು 15 ದಿನಗಳ ನಿರಂತರ ಹುಡುಕಾಟದ ಬಳಿಕ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಕೇಳೂರ್ ಗ್ರಾಮದ ನಿವಾಸಿ ರಾಮಪ್ಪ (62) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ
ರಾಮಪ್ಪ ಅವರು ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಆಕಸ್ಮಿಕವಾಗಿ ಕೊಚ್ಚಿಕೊಂಡು ಹೋಗಿದ್ದರು. ಘಟನೆ ನಡೆದ ತಕ್ಷಣ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಇದನ್ನೂ ಓದಿ > > ಸೋಮಿನಕೊಪ್ಪ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ!
ಸತತ 15 ದಿನಗಳ ಹುಡುಕಾಟದ ಬಳಿಕ ರಾಮಪ್ಪ ಅವರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಿದ್ದಾರೆ.














